ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಅಫಜಲಪುರ ಸಿಪಿಐ ಅಮಾನತು

Date:

ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಬಂಧನದ ವಿಚಾರದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಕಲಬುರಗಿ ಐಜಿಪಿ ಅಜಯ್ ಹಿಲೋರಿ ಅವರು ಅಫಜಲಪುರ ಸಿಪಿಐ ಪಂಡಿತ ಸಗರ ಅವರನ್ನು ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಕೆಇಎ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌  ನವೆಂಬರ್ 7 ರಂದು ಕಲಬುರಗಿ ನಗರದ ಖಾಸಗಿ ಅಪಾರ್ಟ್‌ಮೆಂಟ್‌ ನಲ್ಲಿ ಇರುವ ಬಗ್ಗೆ ಮಾಹಿತಿ ಇದ್ದರೂ ಕೂಡ ಪಂಡಿತ ಸಗರ ಅವರು ಸ್ಥಳಕ್ಕೆ ತಡವಾಗಿ ಹೋದ ಕಾರಣ ಆರ್.ಡಿ ಪಾಟೀಲ್ ತಪ್ಪಿಸಿಕೊಂಡು ಹೋಗಿರುತ್ತಾನೆ ಎಂದು ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಹಿಳಾ ಜ್ಯೋತಿಷಿ ಭೀಕರ ಹತ್ಯೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಇಎ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಡಿ ಈ ಹಿಂದೆ ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತುಗೊಂಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...