ಐಪಿಎಲ್‌ 2023 | ಕೆಕೆಆರ್‌ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ಆರ್‌ಸಿಬಿ

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ಕೆಕೆಆರ್‌ ತಡೆಒಡ್ಡಿದೆ.

ಗೆಲುವಿಗೆ ಕೆಕೆಆರ್‌ ಮುಂದಿಟ್ಟಿದ್ದ201 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದಲ್ಲಿ 179 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ತವರು ಅಭಿಮಾನಿಗಳ ಸಮ್ಮುಖದಲ್ಲೇ 21 ರನ್‌ಗಳ ಅಂತರದಲ್ಲಿ ಕೋಲ್ಕತ್ತಾ ತಂಡಕ್ಕೆ ಶರಣಾಯಿತು.

ಈ ಗೆಲುವಿನೊಂದಿಗೆ ಪ್ರಸಕ್ತ ಟೂರ್ನಿಯಲ್ಲಿ ಸತತ 4 ಪಂದ್ಯಗಳ ಸೋಲಿನ ಸರಪಳಿಯನ್ನು ಕೆಕೆಆರ್‌ ತುಂಡರಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಾಯಕ ವಿರಾಟ್‌ ಕೊಹ್ಲಿ 54 ರನ್‌, ಮಹಿಪಾಲ್ ಲೋಮ್ರೋರ್ 34 ಹಾಗೂ ದಿನೇಶ್ ಕಾರ್ತಿಕ್ 22 ರನ್‌ಗಳಿಸಿದರು. ಎಂದಿನಂತೆ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬ್ಯಾಟರ್‌ಗಳು ತಂಡದ ಗೆಲುವಿಗಾಗಿ ಕ್ರೀಸ್‌ನಲ್ಲಿ ನೆಲೆಯೂರಲಿಲ್ಲ. ಗ್ಲೆನ್‌ ಮ್ಯಾಕ್ಸ್‌ವೆಲ್‌ 5 ಮತ್ತು ಶಹಬಾಝ್‌ ಅಹ್ಮದ್‌ 2 ರನ್‌ಗಳಿಸಲಷ್ಟೇ ಶಕ್ತರಾದರು.  

ಕೆಕೆಆರ್‌ ಪರ ವರುಣ್‌ ಚಕ್ರವರ್ತಿ 3,  ಆಂಡ್ರೆ ರಸೆಲ್‌ ಮತ್ತು ಸುಯಾಷ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು.  ಇದರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸತತ 5ನೇ ಗೆಲುವು ಸಾಧಿಸಿದಂತಾಗಿದೆ.

ಇದಕ್ಕೂ ಮೊದಲು ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಆರಂಭಿಕ ಜೇಸನ್‌ ರಾಯ್‌ ಸತತ ಎರಡನೇ ಅರ್ಧಶತಕ ಮತ್ತು ನಾಯಕ ನಿತೀಶ್‌ ರಾಣಾ ಗಳಿಸಿದ ಬಿರುಸಿಬ 48 ರನ್‌ಗಳ ನೆರವಿನಿಂದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿತ್ತು. ನಾರಾಯಣ್‌ ಜಗದೀಶನ್‌ 27, ವೆಂಕಟೇಶ್‌ ಅಯ್ಯರ್‌ 31 ಹಾಗೂ ಕೊನೆಯಲ್ಲಿ ರಿಂಕು ಸಿಂಗ್‌ 18 ರನ್‌ಗಳಿಸಿ ಅಜೇಯರಾಗುಳಿದರು.  

ಆರ್‌ಸಿಬಿ ಪರ ವಿಜಯಕುಮಾರ್‌ ವೈಶಾಕ್‌ ಮತ್ತು ಸ್ಪಿನ್ನರ್ ವನಿಂದು ‌ ಹಸರಂಗ ತಲಾ 2 ವಿಕೆಟ್‌ ಪಡೆದರೆ, ಆಂಡ್ರೆ ರಸೆಲ್‌ ವಿಕೆಟ್‌ ಸಿರಾಜ್‌ ಪಾಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...