ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

Date:

ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆವರೆಗೆ ಶಾಂತಯುತ ಮತದಾನ ನಡೆದಿದ್ದು, ಅಂದಾಜು ಶೇ.78 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ತಿಳಿಸಿದ್ದಾರೆ.

“ಐದು ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾನದ ಪ್ರಮಾಣವು ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಶೇ.7.64 ರಷ್ಟು, 11 ಗಂಟೆಯವರೆಗೆ ಶೇ.21.46 ರಷ್ಟು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39.94 ರಷ್ಟು, ಮಧ್ಯಾಹ್ನ 3 ಗಂಟೆಯವರೆಗೆ ಶೇ.56.45 ರಷ್ಟು, ಸಂಜೆ 5 ಗಂಟೆ ವೇಳೆಗೆ ಶೇ.70.49 ರಷ್ಟು ದಾಖಲಾಗಿದ್ದು, ಮತದಾನ ಮುಕ್ತಾಯದ ಸಮಯದ ವೇಳೆಗೆ ಅಂದಾಜು ಶೇ.78ರಷ್ಟು ಮತದಾನವಾಗಿದೆ” ಎಂದು ತಿಳಿಸಿದ್ದಾರೆ.

ಎಲ್ಲ ಐದು ವಿಧಾನಸಭಾ ಕ್ಷೇತ್ರಗಳ 1,322 ಮತಗಟ್ಟೆಗಳಲ್ಲಿ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿತು. ಜಿಲ್ಲೆಯಲ್ಲಿ ಮತದಾನವು ಮುಕ್ತ, ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಜಿಲ್ಲಾಡಳಿತದಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರಿಂದ ಶಾಂತರೀತಿಯಿಂದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾರ್ವಜನಿಕರಿಂದ ಮೆಚ್ಚುಗೆ: ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳತ್ತ ಬಂದು ವೋಟು ಮಾಡಬೇಕು ಎನ್ನುವ ದಿಶೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಲಿ ಕಲೆ, ಕಿನ್ನಾಳ ಕಲೆ, ತಳಿರು ತೋರಣಗಳು, ಬಲೂನುಗಳು, ರಂಗೋಲಿ ಹಾಕುವ ಮೂಲಕ ವಿಶೇಷವಾಗಿ ರೂಪಿಸಿದ್ದ 50 ವಿಶೇಷ ಮತಗಟ್ಟೆಗಳ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ

 ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್, ಅಬಕಾರಿ ಇಲಾಖೆಗಳು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಹಲವು ತಂಡಗಳ ನೋಡಲ್ ಅಧಿಕಾರಿಗಳು, ಎಂಸಿಸಿ., ಎಫ್‌ಎಸ್‌ಟಿ, ವಿಎಸ್‌ಟಿ, ಎಂಸಿಎಂಸಿ, ವಿವಿಟಿ ಸೇರಿದಂತೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ರೀತಿಯ ಕರ್ತವ್ಯದಲ್ಲಿದ್ದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...