ವಿಜಯಪುರ ಮೀಸಲು ಕ್ಷೇತ್ರದಿಂದ ಕೆಆರ್‌ಎಸ್ ಅಭ್ಯರ್ಥಿ ಗಣಪತಿ ರಾಥೋಡ್ ಸ್ಪರ್ಧೆ

Date:

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಮುಖಂಡರು ಗೆಲುವಿಗೆ ಶ್ರಮಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯರ್ಥಿ ಗಣಪತಿ ರಾಠೋಡ ಮನವಿ ಮಾಡಿದರು.

ವಿಜಯಪುರ ಪಕ್ಷದ ಕಚೇರಿಯಲ್ಲಿ ಕೆಆರ್‌ಎಸ್‌ ಪಕ್ಷದ ಬಿ ಫಾರ್ಮ್ ಪಡೆದ ನಂತರ ಮಾತನಾಡಿದ ಅವರು, “ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನತೆ ರೋಸಿಹೋಗಿದ್ದು, ಹಣ ಸಂಪಾದನೆ ಮಾಡುವುದನ್ನೇ ರಾಜಕೀಯವನ್ನಾಗಿ ಮಾಡಿಕೊಂಡಿರುವುದರಿಂದ ಜನರ ಕಷ್ಟಗಳು ರಾಜಕಾರಣಿಗಳಿಗೆ ತಿಳಿಯುತ್ತಿಲ್ಲ. ಈ ಪಕ್ಷಗಳದ್ದು ಕೇವಲ ಇನ್ವೆಸ್ಟ್‌ಮೆಂಟ್ ರಾಜಕೀಯವಾಗಿದ್ದು, ಪಾರದರ್ಶಕ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಜನರಿಗೆ ಪಾರದರ್ಶಕ ಆಡಳಿತದ ಅವಶ್ಯಕತೆ ಇದ್ದು, ನಮ್ಮ ಪಕ್ಷದ ತತ್ವ ಸಿದ್ಧಾಂತವೂ ಇದೇ ಆಗಿದೆ” ಎಂದು ಹೇಳಿದರು.

“ಚುನಾವಣೆಗಳಲ್ಲಿ ಹಣ, ಹೆಂಡದ ಆಸೆ ಆಮಿಷವೊಡ್ಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡಲಿದೆ. ಜನರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಈಡೇರಿಸಲು ನಮ್ಮ ಪಕ್ಷವು ಪಣ ತೊಟ್ಟಿದ್ದು, ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ಸ್ಪರ್ಧೆ ನಡೆಸುತ್ತಿದ್ದು, ವಿಜಯಪುರ ಜಿಲ್ಲೆ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚು ಶ್ರಮವಹಿಸುವ ಮೂಲಕ ನನ್ನ ಗೆಲುವಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಇದೇ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಶಿವಾನಂದ ಯಡಹಳ್ಳಿ ಅವರು ಮಾತನಾಡಿದರು. ಅವರ ಜೊತೆಯಲ್ಲಿ ಜಿಲ್ಲಾಧ್ಯಕ್ಷರಾದ ಅಶೋಕ ಜಾಧವ, ರಾಕೇಶ ಇಂಗಳಗಿ, ವಿಕ್ರಮ ವಾಗಮೋರೆ, ಹಮೀದ್ ಇನಾಮದಾರ, ಪ್ರವೀಣ ಕನಸೆ, ಕಾಂತುಗೌಡ ಬೆಂಡವಾಡ, ನಬಿರಸುಲ ಜಮಾದಾರ, ಸುರೇಶ ನಿಂಬೋಣಿ, ದೀಪ ಮರನೂರ, ರಾವುತಪ್ಪ ಮದಬಾವಿ, ದುರ್ಗಪ್ಪ ಬೂದಿಹಾಳ, ಶ್ರೀಶೈಲ ಮಠ, ಲಕ್ಷಣ್ ಚಡಚಣ ಗೋರಕನಾಥ ಚೌವಾಣ ಮತ್ತಿತರರು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

ಚಿಕ್ಕಬಳ್ಳಾಪುರ | ನೀರಿನ ಗ್ಯಾರಂಟಿ ಕೊಡುವವರಿಗೆ ಮತ ನೀಡಿ: ಆಂಜನೇಯ ರೆಡ್ಡಿ

ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ...