ಬಳ್ಳಾರಿ | ದಲಿತರಿಗೆ ಹೋಟೆಲ್‌ನಲ್ಲಿ ಊಟ ಕೊಡದೆ ಅಸ್ಪೃಶ್ಯತೆ ಆಚರಣೆ

Date:

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೋಟೆಲ್‌ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಿಸಿದ್ದಾರೆ. ‘ಹೋಟೆಲ್‌ ಮುಚ್ಚುತ್ತೇನೆ. ಆದರೆ, ನಿಮಗೆ ಊಟ ಕೊಡುವುದಿಲ್ಲ’ ಎಂದು ಹೋಟೆಲ್‌ನ ನಡೆಸುವ ಮಹಿಳೆ ದಲಿತ ಯುವಕರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಆಕೆಯ ನಡೆಯನ್ನು ಖಂಡಿಸಿರುವ ಯುವಕರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಕರಣದ ಮಾಹಿತಿ ಪಡೆದ ಕುರುಗೋಡು ತಹಶೀಲ್ದಾರ್ ರಾಘವೇಂದ್ರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣ ಸಂಬಂಧ, ಹೆಚ್ಚಿನ ಮಾಹಿತಿಗಾಗಿ ಕುರುಗೋಡು ತಹಶೀಲ್ದಾರ್‌ ರಾಘವೇಂದ್ರ ಅವರನ್ನು ಈದಿನ.ಕಾಮ್‌ ಸಂಪರ್ಕಿಸಿದ್ದು, ಅವರು ನಮ್ಮ ಕರೆಗೆ ಉತ್ತರಿಸಿಲ್ಲ.

ಈ ಹಿಂದೆ, ಧಾರವಾಡದಲ್ಲಿ ದಲಿತರಿಗೆ ಹೋಟೆಲ್‌, ಸಲೂನ್‌ಗಳಲ್ಲಿ ಪ್ರವೇಶವಿಲ್ಲ ಎಂಬ ಸುದ್ದಿ ಬೆಳಕಿಗೆ ಬಂದಿತ್ತು. ಇತ್ತೀಚೆಗೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲುಕಿನ ಗೇರಮರಡಿ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದ ಗುಂಪು ಹಲ್ಲೆ ನಡೆಸಿತ್ತು. ಇದೀಗ, ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿರುವ ಮೋದಿ: ರಾಹುಲ್ ಗಾಂಧಿ

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...