ಚಲುವರಾಯಸ್ವಾಮಿ ವಿರುದ್ಧ ಪತ್ರ; ವರದಿ‌‌ ನೀಡಲು ಮಂಡ್ಯ ಎಸ್‌ಪಿಗೆ ಸೂಚನೆ: ಸಚಿವ ಪರಮೇಶ್ವರ್

Date:

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯದ ಕೃಷಿ ಅಧಿಕಾರಿಗಳು ನಾವು ಯಾರೂ ಪತ್ರ ಬರೆದಿಲ್ಲ ಅಂತ ಹೇಳಿದ್ದಾರೆ.
ರಾಜ್ಯಪಾಲರಿಗೆ ಬರೆದ ಪತ್ರ ನಕಲಿಯಾಗಿದೆ. ಈ ಬಗ್ಗೆ ವರದಿ‌‌ ನೀಡಲು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “‌ಚಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ನಕಲಿ ಪತ್ರ ಬರೆದಿದ್ದಾರೆ.‌ ಈ‌ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ಮಾತನಾಡಿ ನಾನು ವರದಿ ತರಿಸಿಕೊಳ್ಳುತ್ತೇನೆ” ಎಂದರು.

“ಅಧಿಕಾರಿಗಳು ನಾವು ಯಾರೂ ಪತ್ರ ಬರೆದಿಲ್ಲ ಎಂದು ದೂರು ನೀಡಿದ್ದಾರಂತೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆಯ ಬಗ್ಗೆ ವರದಿ ಬಂದ ನಂತರ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರದ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಐಟಿ, ಗೃಹ ಇಲಾಖೆ ಕಠಿಣ ಕಾನೂನು ತರುವ ಬಗ್ಗೆ ಚರ್ಚೆ ಆಗುತ್ತಿದೆ. ಸೈಬರ್ ಕ್ರೈಮ್ ನವರು ಈಗಾಗಲೇ ಯಾರು ಹೀಗೆ ಪತ್ರಗಳನ್ನು ಬರೆಯುತ್ತಿದ್ದಾರೆ ಅಂತ ಹುಡುಕುತ್ತಿದ್ದಾರೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೇಹಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು...

ʼಈ ದಿನʼ ಸಮೀಕ್ಷೆ | ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ; ಮೋದಿಯ ನಿಜಮುಖ ಅರಿತ ಜನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ...

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ...