ಉತ್ತರ ಕನ್ನಡ | ಬಿಜೆಪಿ ‘ಟಿಕೆಟ್ ಮಿಸ್’ ಬೆನ್ನಲ್ಲೇ ಪೋಸ್ಟ್ ಹಂಚಿಕೊಂಡ ಆರು ಬಾರಿಯ ಸಂಸದ ಅನಂತ್ ಕುಮಾರ್ ಹೆಗಡೆ; ಅಷ್ಟೇ ಸಾಕಂತೆ!

Date:

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿಯ 5ನೇ ಪಟ್ಟಿ ಭಾನುವಾರ ಬಿಡುಗಡೆಯಾಗಿದೆ. ದೇಶದ ಒಟ್ಟು 111 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಕರ್ನಾಟಕದ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಕೂಡಾ ಪ್ರಕಟಿಸಲಾಗಿದೆ.

ಕರ್ನಾಟಕ ಮಟ್ಟಿಗೆ ಇದು ಎರಡನೇ ಪಟ್ಟಿಯಾಗಿದೆ. ಈ ಮೊದಲು 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿತ್ತು. ಒಟ್ಟು 28 ಕ್ಷೇತ್ರದ ಪೈಕಿ ಮೂರು ಕ್ಷೇತ್ರವನ್ನು ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.

ಎರಡನೇ ಪಟ್ಟಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು, ಬೆಳಗಾವಿ, ಉತ್ತರ ಕನ್ನಡ, ರಾಯಚೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಇದರಲ್ಲಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದ ‘ಹಿಂದೂ ಫೈರ್ ಬ್ರ್ಯಾಂಡ್’ ಆಗಿದ್ದ ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ನಿರೀಕ್ಷೆಯಂತೆ ಟಿಕೆಟ್‌ ಮಿಸ್‌ ಮಾಡಿಕೊಂಡಿದ್ದಾರೆ. ಅವರ ಬದಲಿಗೆ ಮಾಜಿ ಸ್ಪೀಕರ್‌, ಆರ್‌ಎಸ್‌ಎಸ್‌ನ ಕಟ್ಟಾಳು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಈ ಬಾರಿ ಹೈಕಮಾಂಡ್‌ ಅವಕಾಶ ನೀಡಿದೆ. ಆ ಮೂಲಕ 28 ವರ್ಷಗಳ ನಂತರ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಬದಲಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಹಿಂದೂ ಫೈರ್‌ ಬ್ರ್ಯಾಂಡ್‌’ ಎಸಿನಿಕೊಳ್ಳುತ್ತಿದ್ದ ಅನಂತ್ ಕುಮಾರ್ ಹೆಗಡೆ ಅವರು ಇತ್ತೀಚೆಗೆ ಸಾಕಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸದಾ ಸುದ್ದಿಯಲ್ಲಿದ್ದರು. ಕಳೆದ ಐದು ವರ್ಷಗಳಿಂದ ಸುಮ್ಮನಿದ್ದ ಹೆಗಡೆ, ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಲಗೆ ಹರಿಯಬಿಡುವ ಮೂಲಕ ಸುದ್ದಿಯಾಗಿದ್ದರು.

ಅದರಲ್ಲೂ ಪ್ರಮುಖವಾಗಿ, ಸಿಎಂ ಸಿದ್ದರಾಮಯ್ಯ ಅವರಿಗೆ ಅವ್ಯಾಚ ಶಬ್ದಗಳ ಬಳಕೆ, ಸಂವಿಧಾನ ಬದಲಾವಣೆ ಹೇಳಿಕೆ, ಮಾಧ್ಯಮಗಳನ್ನು ನಾಯಿಗಳು ಎಂದು ಹೇಳುವ ಮೂಲಕ ಬಿಜೆಪಿಯವರಿಗೇ ಮುಜುಗರ ಉಂಟು ಮಾಡುವಂತೆ ಮಾಡಿದ್ದರು. ಸಂವಿಧಾನ ಬದಲಾವಣೆ ಎಂದಿದ್ದ ಅನಂತಕುಮಾರ್‌ ವಿರುದ್ಧ ಕಾಂಗ್ರೆಸ್‌ ಅಭಿಯಾನ ರೂಪಿಸಿತ್ತು. ಅಲ್ಲದೇ, ಈ ಹೇಳಿಕೆಯು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಕೂಡಾ ಆಗಿತ್ತು. ಈ ಎಲ್ಲ ಬೆಳವಣಿಗೆಯ ನಡುವೆಯೇ ಅನಂತ್ ಕುಮಾರ್ ಅವರನ್ನು ಬಿಜೆಪಿ ಹೈಕಮಾಂಡ್ ಮನೆಗೆ ಕಳುಹಿಸಿದೆ.

1996ರಿಂದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಅನಂತ್ ಕುಮಾರ್ ಹೆಗಡೆ ಪ್ರತಿನಿಧಿಸುತ್ತಾ ಬಂದಿದ್ದರು. 1999ರಲ್ಲಿ ಸೋತಿದ್ದರೂ, ಒಟ್ಟು ಆರು ಬಾರಿ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ, ಇಷ್ಟು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಅನ್ನೋದು ಅಷ್ಟಕ್ಕಷ್ಟೇ ಎನ್ನುವ ಮಾತುಗಳು ಪಕ್ಷದ ಕಾರ್ಯಕರ್ತರೇ ಬಹಿರಂಗವಾಗಿ ಹೇಳಿಕೊಂಡಿದ್ದರು. ಅಲ್ಲದೇ, ನಮ್ಮ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ನಮ್ಮದೇ ಸಂಸದರನ್ನು ಸಂಪರ್ಕ ಮಾಡಲು ಭಾರೀ ಕಷ್ಟಪಡುತ್ತಿದ್ದೆವು ಎಂದು ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ವಿವಾದಾತ್ಮಕ ಹೇಳಿಕೆಯ ಸರದಾರ ಹೆಗಡೆಯನ್ನು ಬಿಜೆಪಿ ಹೈಕಮಾಂಡ್, ಮೂಲೆಗೆ ತಳ್ಳಿದೆ.

ಲೋಕಸಭೆ ಚುನಾವಣೆಗೆ ಉತರ ಕನ್ನಡ ಕ್ಷೇತ್ರದಿಂದ ವಿಧಾನಸಭೆಯ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದ ಬೆನ್ನಲ್ಲೇ, ಸಂಸದ ಅನಂತಕುಮಾರ ಹೆಗಡೆ ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಕ್ಷೇತ್ರದ ಜನತೆಗೆ ನಮಿಸಿ ಪೋಸ್ಟ್‌ವೊಂದನ್ನು ಹರಿಬಿಟ್ಟಿದ್ದಾರೆ.

ಪೋಸ್ಟ್‌ನಲ್ಲಿ ಇರುವುದೇನು?

ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ.

ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು!.

Facebook ಪೋಸ್ಟ್

“ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ” ಎಂದು ಹೇಳುತ್ತಾ ಅನಂತಕುಮಾರ ಹೆಗಡೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...