ಮಧ್ಯ ಪ್ರದೇಶ | ರಸ್ತೆ ಅಪಘಾತದಲ್ಲಿ 14 ಮಂದಿ ಸಾವು, 20 ಜನರಿಗೆ ಗಾಯ

Date:

ಮಧ್ಯ ಪ್ರದೇಶ  ದಿಂಡೋರಿ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ದಿಂಡೋರಿ ಜಿಲ್ಲೆಯ ಬದ್‌ಜಾರ್‌ ಘಾಟ್ ಸಮೀಪ ಮಧ್ಯಾಹ್ನ 1.30ರ ಸುಮಾರಿಗೆ ಅಪಘಾತ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ ಚಾಲಕ ತಿರುವು ತೆಗೆದುಕೊಳ್ಳುವಾಗ ವಾಹನ ನಿಯಂತ್ರಣ ತಪ್ಪಿ 40 ರಿಂದ 50 ಅಡಿ ಆಳಕ್ಕೆ ಉರುಳಿದೆ.

ಮೃತಪಟ್ಟ 14 ಮಂದಿಯಲ್ಲಿ 7 ಪುರುಷರು, 6 ಮಹಿಳೆಯರು ಒಬ್ಬ ಬಾಲಕ ಸೇರಿದ್ದಾನೆ. ಎಲ್ಲರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಶಹಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ʼದಿಲ್ಲಿ ಚಲೊʼ ಪ್ರತಿಭಟನೆ | ಮತ್ತೊಬ್ಬ ರೈತ ಸಾವು; 15 ದಿನಗಳಲ್ಲಿ ಆರನೇ ಸಾವು

ದಿಂಡೂರಿ ಜಿಲ್ಲೆಯ ಮುಶುರ್‌ಗುರಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವಾಪಸ್‌ ಬರುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.

ದುರಂತಕ್ಕೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್‌ ನಾಥ್ ಸಂತಾಪ ಸೂಚಿಸಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...