ರಾಮನಗರ | ತಿಂಗಳಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 100 ಆಶ್ರಯ ಮನೆ: ಶಾಸಕ ಬಾಲಕೃಷ್ಣ

Date:

ಒಂದು ತಿಂಗಳ ಅವಧಿಯೊಳಗೆ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ 100 ಆಶ್ರಮ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಹೇಳಿದ್ದಾರೆ.

ಮಾಗಡಿ ತಾಲೂಕಿನ ಕುದೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಒಂದು ತಿಂಗಳೊಳಗಾಗಿ 100 ಮನೆಗಳನ್ನು ನಿರ್ಮಿಸಿ, ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಅರ್ಹರ ಪಟ್ಟಿಗಳನ್ನು ಪಿಡಿಒಗಳು ಸಿದ್ದಪಡಿಸಬೇಕು” ಎಂದು ಹೇಳಿದರು.

“ಫಾರಂ ನಂ.50, 53 ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಅವರ ಭೂಮಿಯ ಸರ್ವೇ ನಡೆಸಿ, ಹಕ್ಕುಪತ್ರ ನೀಡಬೇಕು. ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗೆ ಬರುವ ಜನರಿಗೆ ಸರಿಯಾಗಿ ಸ್ಪಂಧಿಸಬೇಕು. ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ, ಶಿರಸ್ತೆದಾರ್‌ ಸೋಮಶೇಖರ್, ಅಕ್ಷರ ದಾಸೋಹ ಅಧಿಕಾರಿ ಗಂಗಾಧರ್, ಸಿಡಿಪಿಒ ಸುರೇಂದ್ರ, ಗ್ರಾ.ಪಂ. ಅಧ್ಯಕ್ಷೆ ಕುಸುಮಾ, ಸದಸ್ಯೆ ನಿರ್ಮಲಾ, ಜಯರಾಮು, ಕೆ.ಬಿ. ಬಾಲರಾಜು, ಸುಗ್ಗನಹಳ್ಳಿ ರಂಗಸ್ವಾಮಿ, ಜಗದೀಶ್, ಪಿಡಿಒ ವೆಂಕಟೇಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...