‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ

Date:

ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಇಂದು ಸಂಜೆ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪವಾಗಿರುವುದಾಗಿ ವರದಿಯಾಗಿದೆ.

ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಬೇಕಾದರೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಯಲ್ಲಿ ಪ್ರಸ್ತಾಪ ಮಾಡಿರುವುದಾಗಿ ಸಭೆ ಮುಗಿದ ಬಳಿಕ ಕೆಲವು ನಾಯಕರು ಮಾಹಿತಿ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ಟ್ವೀಟ್ ಮಾಡಿದೆ.

ಈ ಬಗ್ಗೆ ಇಂಡಿಯಾ ಮೈತ್ರಿಕೂಟ ಸಭೆಯ ಬಳಿಕ ನಡೆದ ಮಾಧ್ಯಮಗೋಷ್ಠಿಯ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಇಂಡಿಯಾ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ನಮಗೆ ಮೊದಲು ಸಂಸದರು ಗೆಲ್ಲುವುದು ಮುಖ್ಯ. ಸಂಸದರು ಗೆದ್ದು ಬಂದ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬಹುದು ಎಂಬುದರ ಕುರಿತು ಚರ್ಚಿಸುತ್ತೇವೆ. ಮೊದಲು ಮೈತ್ರಿಕೂಟದ ಸಂಸದರು ಗೆದ್ದು ಬರಲಿ. ಆಮೇಲೆ ನೋಡೋಣ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...