ದಕ್ಷಿಣ ಕನ್ನಡ | ಜಿಲ್ಲಾ ಕಾರಾಗೃಹದ ಮೇಲೆ ಮಂಗಳೂರು ಪೊಲೀಸರ ದಿಢೀರ್ ದಾಳಿ

Date:

  • ಕಾರಾಗೃಹ ದಾಳಿ ಮಾಹಿತಿ ತಿಳಿದು ಎಚ್ಚೆತ್ತ ಕೈದಿಗಳು
  • ಬೀಡಿ, ಸಿಗರೇಟ್, ಪಾನ್ ಮಸಾಲದ ಪಾಕೇಟ್‌ ಪತ್ತೆ

ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.

ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ ವೇಳೆ ಬೀಡಿ, ಸಿಗರೇಟ್, ಪಾನ್ ಮಸಾಲ ಮತ್ತು ಗುಟ್ಕಾ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? : ಬಳ್ಳಾರಿ | ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಾಸಕ ತುಕಾರಾಂಗೆ ಬೆವರಿಳಿಸಿದ ಗ್ರಾಮಸ್ಥರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ದಾಳಿ ಮಾಡಲು ನಿರ್ಧರಿಸಿದ್ದರು. ಆದರೆ, ಪೊಲೀಸರ ದಾಳಿ ಬಗ್ಗೆ ಮಾಹಿತಿ ತಿಳಿದಿದ್ದ ಕೈದಿಗಳು ಎಚ್ಚರಗೊಂಡಿರುವ ಶಂಕೆ ವ್ಯಕ್ತವಾಗಿದೆ, ಮತ್ತೊಮ್ಮೆ ದಾಳಿ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ನಡೆಸಿದ ದಾಳಿಯ ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವ ವಹಿಸಿಕೊಂಡಿದ್ದರೆ, ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌, ಪಿಎಸ್ಐ ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...