ಮಂಗಳೂರು | ಪೊಲೀಸರ ಕೊಲೆಗೆ ಯತ್ನಿಸಿದ್ದ ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

Date:

ಸಿಸಿಬಿ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಟೋರಿಯಸ್ ರೌಡಿಶೀಟರ್ ಆಕಾಶ್ ಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಯು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದು ಬಂಧಿಸಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸರ ಕೊಲೆಗೆ ಯತ್ನಿಸಿದ್ದ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆಕಾಶಭವನ್ ಶರಣ್ ಹಲವು ಪ್ರಕರಣಗಳಲ್ಲಿ ಬಂಧನ ವಾರೆಂಟ್ ಎದುರಿಸುತ್ತಿದ್ದು ಜನವರಿ 2ರಂದು ರಾತ್ರಿ ಮೇರಿಹಿಲ್ ನಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಪೊಲೀಸರು ಅಡ್ಡಗಟ್ಟಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಗಳೂರು ಸಿಸಿಬಿ ವಿಭಾಗದ ಪೊಲೀಸ್ ತಂಡ ಕಾರನ್ನು ಅಡ್ಡಗಟ್ಟುತ್ತಲೇ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಪೊಲೀಸರು ಯಾವುದೇ ಅಪಾಯ ಇಲ್ಲದೆ ತಪ್ಪಿಸಿಕೊಂಡಿದ್ದರು.

ಕಳೆದ ಅಕ್ಟೋಬ‌ರ್ ತಿಂಗಳಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ ಸೇರಿ ಐದು ಮಂದಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸುಪಾರಿ ಪಡೆದು ಕೊಲೆ ಕೃತ್ಯ ನಡೆಸಿದ್ದ ಆಕಾಶ್ ಭವನ್ ಶರಣ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆ ಪ್ರಕಟವಾಗಿರಲಿಲ್ಲ. ಉಳಿದ ಐದು ಮಂದಿ ಜೈಲು ಸೇರಿದ್ದರೆ, ಶರಣ್ ಮಾತ್ರ ತಲೆಮರೆಸಿಕೊಂಡಿದ್ದ.

ಆಕಾಶಭವನ್ ಶರಣ್ ಮೇಲೆ ಮಂಗಳೂರು ಮತ್ತು ಉಡುಪಿಯಲ್ಲಿ ಕೊಲೆ, ಕೊಲೆಯತ್ನ ರೇಪ್, ಹಫ್ತಾ ಸೇರಿದಂತೆ 21 ಕೇಸುಗಳು ದಾಖಲಾಗಿದ್ದು, ಮಂಗಳೂರಿನ ನಟೋರಿಯಸ್ ರೌಡಿಯೆಂದು ಗುರುತಿಸಲ್ಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪಲ್ಲ: ಹೇಳಿಕೆ ಸಮರ್ಥಿಸಿಕೊಂಡ ಸ್ಪೀಕರ್ ಯು ಟಿ ಖಾದರ್

ಕಳೆದ ಬಾರಿ 2020 ಅಕ್ಟೋಬರ್ 20ರಂದು ಸುರೇಂದ್ರ ಬಂಟ್ವಾಳ್ ಎನ್ನುವ ಫೈನಾನ್ಸರ್ ಅನ್ನು ಜೈಲಿನಲ್ಲಿದ್ದುಕೊಂಡೇ ತನ್ನ ಸಹಚರರಿಂದ ಕೊಲ್ಲಿಸಿದ್ದ ಆರೋಪ ಕೂಡ ಈತನ ಮೇಲಿದೆ. ಆನಂತರ, 2022ರ ಕೊನೆಯಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಶರಣ್, 2023ರ ಜನವರಿ 14ರಂದು ಸುರತ್ಕಲ್ ಬಳಿ ಹಣಕ್ಕಾಗಿ ಸ್ಕೂಟರ್ ಅಡ್ಡಗಟ್ಟಿ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಾಲ್ಕು ತಿಂಗಳಲ್ಲಿ ಮತ್ತೆ ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದನು. ಸುಳ್ಯ ಕೊಲೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಿರುಗಾಡುತ್ತಿದ್ದ ಶರಣ್, ಮಂಗಳೂರು ಪೊಲೀಸರ ಪಾಲಿಗೆ ‘ಮೋಸ್ಟ್ ವಾಂಟೆಡ್’ ಆಗಿದ್ದಾನೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಗೆ ಬೆಂಬಲ

ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ...

ನೇಹಾ ಕೊಲೆ ಪ್ರಕರಣ | ಎನ್‌ಕೌಂಟರ್‌ ಜಾರಿಯಾಗಬೇಕು: ಸಚಿವ ಸಂತೋಷ್‌ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ...

ಬೆಳಗಾವಿ | ಮಮದಾಪೂರ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಹತ್ಯೆ

ಸುಮಾರು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ...