ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

Date:

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ ಎಂ ಸಿ ಮೇರಿ ಕೋಮ್‌ ರಾಜೀನಾಮೆ ನೀಡಿದ್ದಾರೆ. ಕೆಲವು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ಮೇರಿ ಕೋಮ್ ತಿಳಿಸಿದ್ದಾರೆ.

ತಮ್ಮ ಹುದ್ದೆಯಿಂದ ತೆರವುಗೊಳಿಸುವಂತೆ ಮೇರಿ ಕೋಮ್‌ ಬರೆದ ಪತ್ರವನ್ನು ಭಾರತದ ಒಲಿಂಪಿಕ್ ಅಸೋಷಿಯೇಷನ್‌ ಅಧ್ಯಕ್ಷೆ ಪಿ ಟಿ ಉಷಾ ತಿಳಿಸಿದ್ದಾರೆ.

“ಸಾಧ್ಯವಿರುವ ಎಲ್ಲ ಹಂತದಲ್ಲಿಯೂ ನನ್ನ ದೇಶಕ್ಕೆ ಸೇವೆ ಸಲ್ಲಿಸಲು ಗೌರವಿತವಾಗಿ ಪರಿಗಣಿಸಿದ್ದೆ. ಅದಕ್ಕಾಗಿ ನಾನು ಮಾನಸಿಕವಾಗಿ ಸಿದ್ಧತೆ ನಡೆಸಿದ್ದೆ. ಆದಾಗ್ಯೂ, ಮಹತ್ವಪೂರ್ಣ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವುದಕ್ಕೆ ದುಃಖವಾಗುತ್ತಿದ್ದು, ವೈಯಕ್ತಿಕ ಕಾರಣಗಳಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು 41 ವರ್ಷದ ಆಟಗಾರ್ತಿ ಬರೆದ ಪತ್ರವನ್ನು ಪಿ ಟಿ ಉಷಾ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

“ನಾನು ಈ ಜವಾಬ್ದಾರಿಯಿಂದ ಹಿಂದೆ ಸರಿಯಲು ಮುಜುಗರವಾಗುತ್ತಿದ್ದು, ನಾನು ಈ ರೀತಿ ಮಾಡುತ್ತಿರುವುದಕ್ಕೆ ಬೇರೆ ಯಾವುದೇ ಆಯ್ಕೆಗಳಿರಲಿಲ್ಲ. ನನ್ನ ದೇಶವನ್ನು ಹುರಿದುಂಬಿಸಲು ನಾನಿರುತ್ತೇನೆ ಹಾಗೂ ಕ್ರೀಡಾಪಟುಗಳು ದೊಡ್ಡ ನಿರೀಕ್ಷೆಗಳೊಂದಿಗೆ ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಸ್ಪರ್ಧೆ ಮಾಡಬೇಕು” ಎಂದು ಮೇರಿ ಕೋಮ್‌ ತಿಳಿಸಿದ್ದಾರೆ.

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ ಮೇರಿ ಕೋಮ್‌ ಅವರನ್ನು ಮಾ.21 ರಂದು ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಪ್ಯಾರಿಸ್ ಒಲಿಂಪಿಕ್ಸ್ ಜುಲೈ 26ರಂದು ಆರಂಭಗೊಂಡು ಆಗಸ್ಟ್ 11ರವರೆಗೂ ನಡೆಯಲಿದೆ.

ಮೇರಿಕೋಮ್ ಅವರು 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಹಾಗೂ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರು ಬಾರಿ ವಿಜೇತರಾಗಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...