ಗಣರಾಜ್ಯೋತ್ಸವದ ವೇಳೆ ಎಡವಟ್ಟು | ಗಾಂಧೀಜಿ ಫೋಟೋ ಇಟ್ಟು, ಅಂಬೇಡ್ಕರ್ ಅವರನ್ನೇ ಮರೆತ ಮೆಟ್ರೋ ಅಧಿಕಾರಿಗಳು!

Date:

ಭಾರತೀಯ ಗಣರಾಜ್ಯೋತ್ಸವವನ್ನು ಪ್ರತಿ ವರ್ಷದ ಜನವರಿ 26ರಂದು ನಾವೆಲ್ಲ ಬಹಳ ಸಂಭ್ರಮದಿಂದ ಆಚರಿಸುತ್ತೇವೆ. ಅದಕ್ಕೆ ಕಾರಣ ಭಾರತದಲ್ಲಿ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ದೇಶದಾದ್ಯಂತ ಸರ್ಕಾರಿ ರಜಾ ದಿನವಾದದರೂ, ಶಾಲೆ ಕಾಲೇಜು ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಧ್ವಜಾರೋಹಣಗೈದು, ವಿಶೇಷವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸುವುದು ಸಾಮಾನ್ಯ.

ನಿನ್ನೆ ಜ.26. ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ 75ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್)ದ ಎಡವಟ್ಟು ಮಾಡಿಕೊಂಡಿದ್ದಾರೆ. ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ ಡಿಪೋದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆ ವೇಳೆ ವೇದಿಕೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಫೋಟೋ ಮಾತ್ರ ಇಟ್ಟು, ಗೌರವ ನಮನ ಸಲ್ಲಿಸಿ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನೇ ಮರೆತು ಎಡವಟ್ಟು ಮಾಡಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮೆಟ್ರೋ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ RECLAIM CONSTITUTION ಎಂಬ ನಾಗರಿಕ ಸಂಘಟನೆಯ ವಿನಯ್ ಕುಮಾರ್, “ನಿಮ್ಮ ಗಣರಾಜ್ಯೋತ್ಸವದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಎಲ್ಲಿದ್ದಾರೆ? ಅವರನ್ನು ಉದ್ದೇಶಪೂರ್ವಕವಾಗಿ ಹೊರಗಿಡಲಾಗಿದೆಯೇ ಅಥವಾ ಅವನು ಬೇರೆನಾದರೂ ಕಾರಣವಿದೆಯೇ ಇದ್ದಾನಾ? ಅಂಬೇಡ್ಕರ್ ಬೇಡವಾದರೇ? ನಿಮ್ಮದೇ ಸಂಸ್ಥೆಯ ಯೂಟ್ಯೂಬ್‌ನಲ್ಲಿ ಹಾಕಿರುವ ವಿಡಿಯೋವನ್ನು ಪೂರ್ತಿಯಾಗಿ ನೋಡಿದೆ. ಎಲ್ಲೂ ಅಂಬೇಡ್ಕರ್ ಅವರ ಫೋಟೋ ನಾನು ಕಂಡಿಲ್ಲ. ಕರ್ನಾಟಕ ಸರ್ಕಾರವು 2020ರಲ್ಲೇ ಅಂಬೇಡ್ಕರ್ ಅವರ ಫೋಟೋ ಇಡುವಂತೆ ಕಡ್ಡಾಯಗೊಳಿಸಿತ್ತು. ಇದು ನಿಮ್ಮ ಗಮನದಲ್ಲಿಲ್ಲವೇ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಜಕಾರಣ

ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಬಿಎಂಆರ್‌ಸಿಎಲ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚವ್ಹಾಣ್ ಅವರನ್ನು ಸಂಪರ್ಕಿಸಿದಾಗ, “ಘಟನೆ ನನ್ನ ಗಮನಕ್ಕೆ ಬಂದಿಲ್ಲ. ತಿಳಿದು ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್‌ನ (ಬಿಎಂಆರ್‌ಸಿಎಲ್‌) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದ ಎಂ. ಮಹೇಶ್ವರ ರಾವ್‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ವಿನಯ್ ಕುಮಾರ್, “ನಿನ್ನೆಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಫೋಟೋ ಇಡದೆ ಬಿಎಂಆರ್‌ಸಿಎಲ್‌ ಬೇಜವಾಬ್ದಾರಿ ಮೆರೆದಿದ್ದಾರೆ. ಗಣರಾಜ್ಯೋತ್ಸವ ದಿನ ಅಂಬೇಡ್ಕರ್ ಅವರ ಫೋಟೋ ಇಡಬೇಕೆಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ಸಂಗತಿ. ಐಎಎಸ್ ಮಟ್ಟದ ಅಧಿಕಾರಿಗಳು ಕೂಡ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿಯೇ ಅಂಬೇಡ್ಕರ್ ಅವರ ಫೋಟೋ ಇಡದೆ ಅಗೌರವ ತೋರಿದ್ದಾರೆ. ಕೇವಲ ಗಾಂಧೀಜಿಯ ಫೋಟೋ ಇಟ್ಟಿದ್ದಾರೆ. ಸಂವಿಧಾನ ಅಪಾಯದಲ್ಲಿದೆ ಎಂಬ ಕೂಗು ದೇಶಾದ್ಯಂತ ಕೇಳುತ್ತಿರುವ ಮಧ್ಯೆಯೇ, ಗಣರಾಜ್ಯೋತ್ಸವ ದಿನದಂದೇ ಸಂವಿಧಾನ ಶಿಲ್ಪಿಯಾಗಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನೇ ಮರೆತು ಬಿಟ್ಟಿದ್ದಾರೆ. ಮೆಟ್ರೋ ಅಧಿಕಾರಿಗಳ ನಡೆಯನ್ನು ಖಂಡಿಸುತ್ತೇನೆ. ಇದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ. ಅಂಬೇಡ್ಕರ್ ಅವರ ಅನುಯಾಯಿಗಳು ಈ ಬಗ್ಗೆ ಧ್ವನಿ ಎತ್ತಬೇಕಿದೆ. ಸರ್ಕಾರ ಕೂಡ ಈ ಬಗ್ಗೆ ಬಿಎಂಆರ್‌ಸಿಎಲ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ” ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...