ಕಾಶ್ಮೀರ | ಸೈಯದ್ ಅಲಿ ಶಾ ಗಿಲಾನಿ ನೇತೃತ್ವ ವಹಿಸಿದ್ದ ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

Date:

ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿಕೊಂಡಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ.

ಭಾರತ ವಿರೋಧಿ ಅಪಪ್ರಚಾರ ಹಾಗೂ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದಾಗಿ ಕೇಂದ್ರ ಗೃಹ ಸಚಿವ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಅಡಿಯಲ್ಲಿ ತೆಹ್ರೀಕ್-ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಸಂಘಟನೆಯನ್ನು ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತೆ”ಹ್ರೀಕ್-ಇ-ಹುರಿಯತ್ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದಾರೆ ಮತ್ತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯನ್ನು ನಿರ್ಲಕ್ಷಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬನಾರಸ್ ವಿವಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಮೂವರ ಬಂಧನ

ಕಳೆದ ನಾಲ್ಕು ದಿನಗಳ ಅಂತರದಲ್ಲಿ ಕೇಂದ್ರ ಸರ್ಕಾರವು ನಿಷೇಧ ಹೇರುತ್ತಿರುವ ಎರಡನೇ ಸಂಘಟನೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸಾರತ್ ಆಲಂ ಬಣ) ಸಂಘಟನೆಯನ್ನು ಕೂಡ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...