ಗೋವಾದಲ್ಲಿ ಶೇ 90ರಷ್ಟು ಅಪರಾಧಗಳಿಗೆ ವಲಸೆ ಕಾರ್ಮಿಕರು ಕಾರಣ: ಪ್ರಮೋದ್‌ ಸಾವಂತ್‌

Date:

  • ಶೇ 90ರಷ್ಟು ಅಪರಾಧಗಳಲ್ಲಿ ವಲಸೆ ಕಾರ್ಮಿಕರು ಭಾಗಿ ಎಂದ ಪ್ರಮೋದ್ ಸಾವಂತ್
  • ವಲಸೆ ಕಾರ್ಮಿಕರಿಗೆ ಕಾರ್ಡ್‌ ವಿತರಿಸಲು ಶೀಘ್ರ ಆನ್‌ಲೈನ್‌ ವ್ಯವಸ್ಥೆ ಎಂದು ಭರವಸೆ

ಗೋವಾದಲ್ಲಿ ನಡೆಯುವ ಗರಿಷ್ಠ ಅಪರಾಧಗಳಿಗೆ ವಲಸೆ ಕಾರ್ಮಿಕರು ಕಾರಣರು ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಸೋಮವಾರ (ಮೇ 1) ಹೇಳಿದ್ದಾರೆ.

ಕಾರ್ಮಿಕ ದಿನಾಚರಣೆ ಪ್ರಯುಕ್ತ ರಾಜ್ಯದ ಪಂಜಿಮ್‌ನಲ್ಲಿ ಶ್ರಮ ಶಕ್ತಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮಾತನಾಡಿದರು.

ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಮಾಲೀಕರು ವಲಸೆ ಕಾರ್ಮಿಕರನ್ನು ನೇಮಿಸಿಕೊಳ್ಳುವುದಕ್ಕೆ ಮುನ್ನ ಅವರ ಕಾರ್ಮಿಕ ಕಾರ್ಡ್ ಪರಿಗಣಿಸಬೇಕು ಎಂದು ಪ್ರಮೋದ್‌ ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಮಿಕ ಕಾರ್ಡ್‌ ನೀಡುವ ಬಗ್ಗೆ ಮಾತನಾಡಿ, “ಗೋವಾದಲ್ಲಿ ಪ್ರತಿಯೊಬ್ಬ ವಲಸೆ ಕಾರ್ಮಿಕರು ಕಾರ್ಮಿಕ ಕಾರ್ಡ್‌ನ್ನು ಹೊಂದಿರಬೇಕು. ಅದಕ್ಕಾಗಿ ನಾವು ಈ ಬಾರಿ ಬಜೆಟ್‌ನಲ್ಲಿ ಕಾರ್ಮಿಕ ಕಾರ್ಡ್‌ ಒದಗಿಸುವ ಬಗ್ಗೆ ಭರವಸೆ ನೀಡಿದ್ದೇವೆ. ಅಪರಾಧ ಎಸಗಿದ ನಂತರ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ಹಿಂತಿರುಗುತ್ತಾರೆ. ಆಗ ಅವರನ್ನು ಹಿಡಿಯುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಅಪರಾಧ ಪ್ರಮಾಣವನ್ನು ಗಮನಿಸಿದರೆ ಗರಿಷ್ಠ ಶೇ 90ರಷ್ಟು ಅಪರಾಧಗಳು ವಲಸೆ ಕಾರ್ಮಿಕರಿಂದ ನಡೆದಿವೆ” ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಹೇಳಿದರು.

ಎರಡು ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒ) ಮೂಲಕ ಎಲ್ಲ ಕಾರ್ಮಿಕರಿಗೆ ಕಾರ್ಡ್‌ಗಳನ್ನು ವಿತರಿಸುವ ಬಗ್ಗೆ ಪ್ರಮೋದ್ ಅವರು ಭರವಸೆ ನೀಡಿದರು. “ಆನ್‌ಲೈನ್‌ ಮೂಲಕ ಕಾರ್ಡ್‌ ದೊರೆಯುವ ವ್ಯವಸ್ಥೆಯನ್ನು ಶೀಘ್ರ ಮಾಡಲಾಗುವುದು” ಎಂದು ಅವರು ತಿಳಿಸಿದರು.

“ಒಮ್ಮೆ ಕಾರ್ಮಿಕ ಇಲಾಖೆಯಲ್ಲಿ ವಲಸೆ ಕಾರ್ಮಿಕರ ನೋಂದಣಿಯಾದರೆ ದತ್ತಾಂಶ ದೊರೆಯಲಿದ್ದು, ಪೊಲೀಸರ ತನಿಖೆಯಲ್ಲಿ ಅಗತ್ಯವೆನಿಸಿದರೆ ನೆರವಾಗಲಿದೆ” ಎಂದು ಪ್ರಮೋದ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಪ್ರಬಲ ವಿರೋಧದ ನಡುವೆ ಕಾರ್ಖಾನೆಗಳ ಮಸೂದೆ ಹಿಂಪಡೆದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್

ಕಳೆದ ಮಾರ್ಚ್‌ನಲ್ಲಿ ಉತ್ತರ ಗೋವಾದ ರೆಸ್ಟೋರೆಂಟ್‌ವೊಂದರಲ್ಲಿ ಡಚ್‌ ಪ್ರವಾಸಿಗ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಅಲ್ಲಿಯ ವಲಸೆ ಕಾರ್ಮಿಕನನ್ನು ಬಂಧಿಸಲಾಗಿತ್ತು.

ಗೋವಾ ಹೋಟೆಲ್‌ಗಳು ತಮ್ಮ ಸಿಬ್ಬಂದಿಗೆ ಗೋವಾ ಕಾರ್ಮಿಕ ಕಾರ್ಡ್‌ ಪಡೆಯುವಂತೆ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಸೂಚಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...