ರಾಗಿಗೆ ಕನಿಷ್ಠ ಬೆಂಬಲ ಬೆಲೆ; ಕ್ವಿಂಟಲ್‌ಗೆ 3,846 ರೂ. ನಿಗದಿ

Date:

ಪ್ರಸಕ್ತ ಕೃಷಿ ಅವಧಿಯಲ್ಲಿ ರಾಗಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ತುಮಕೂರು ಜಿಲ್ಲಾದ್ಯಂತ ಪ್ರತಿ ಕ್ವಿಂಟಲ್ ರಾಗಿಗೆ 3,846 ನಿಗದಿಯಾಗಿದ್ದು, ಅದೇ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ರಾಗಿ ಖರೀದಿಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಅದೇ ಬೆಲೆಯಲ್ಲಿ ಜಿಲ್ಲೆಯ 11 ಖರೀದಿ ಕೇಂದ್ರಗಳಲ್ಲಿ ರಾಗಿಯನ್ನು ಖರೀದಿಸಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, “ರಾಗಿ ಖರೀದಿಗೆ ಡಿಸೆಂಬರ್ 1ರಿಂದ ನೋಂದಣಿ ಆರಂಭವಾಗಲಿದೆ. ಜನವರಿ 1ರಿಂದ ಮಾರ್ಚ್‌ 31ರವರೆಗೆ ಖರೀದಿ ನಡೆಯಲಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತುಮಕೂರು ಜಿಲ್ಲೆಯಲ್ಲಿ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಆ ಪೈಕಿ, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲೂಕಿನಲ್ಲಿ ತಲಾ 2, ಉಳಿದ 7 ತಾಲೂಕುಗಳಲ್ಲಿ ತಲಾ 1 ಖರೀದಿ ಕೇಂದ್ರ ತೆರೆಯಲಾಗುವುದು” ಎಂದಿದ್ದಾರೆ.

“ರಾಗಿ ಖರೀದಿ ವೇಳೆ ದಳ್ಳಾಳಿಗಳು ಪ್ರವೇಶಿಸದಂತೆ ಎಚ್ಚರ ವಹಿಸಬೇಕು. ಖರೀದಿ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ರಾಗಿ ಗುಣಮಟ್ಟ ದೃಢೀಕರಿಸಬೇಕು. ರಾಗಿ ಸಂಗ್ರಹಕ್ಕೆ ಅಗತ್ಯವಿರುವ ಗೋಣಿ ಚೀಲಗಳನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಒದಗಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...