ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

Date:

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಆಘಾತಕಾರಿ ಬೆಳವಣಿಗೆಯೊಂದು ಶನಿವಾರ ತಡರಾತ್ರಿ ನಡೆದಿದೆ. ರಮಝಾನ್ ಹಿನ್ನೆಲೆಯಲ್ಲಿ ರಾತ್ರಿಯ ತರಾವೀಹ್ ನಮಾಝ್ ಮಾಡುತ್ತಿದ್ದ ವೇಳೆ ಹಾಸ್ಟೆಲ್‌ಗೆ ನುಗ್ಗಿದ ಸಂಘಪರಿವಾರದ ಗೂಂಡಾಗಳು ದಾಂಧಲೆ ನಡೆಸಿದ್ದಲ್ಲದೇ, ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ದಾಳಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದೆ. ಈ ವಿಡಿಯೋದಲ್ಲಿ ಘಟನೆಯ ವೇಳೆ ಸ್ಥಳದಲ್ಲಿ ಪೊಲೀಸರು ಉಪಸ್ಥಿತರಿದ್ದರೂ ಕೂಡ, ನೋಡುತ್ತಾ ನಿಂತಿರುವುದು ಕೂಡ ದಾಖಲಾಗಿದ್ದು, ಪೊಲೀಸರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಹಮದಾಬಾದ್‌ನಲ್ಲಿರುವ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದೇಶಿ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಈ ಹಲ್ಲೆ ನಡೆಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಂತ್ರಸ್ತ ವಿದ್ಯಾರ್ಥಿಗಳು, “ಶನಿವಾರ ರಾತ್ರಿ ತಮ್ಮ ಹಾಸ್ಟೆಲ್‌ನಲ್ಲಿ ರಮಝಾನ್ ತಿಂಗಳ ಹಿನ್ನೆಲೆಯಲ್ಲಿ ರಾತ್ರಿಯ ವೇಳೆ ತರಾವೀಹ್ ನಮಾಝ್ ಮಾಡುತ್ತಿದ್ದಾಗ ಬಲಪಂಥೀಯರ ಗುಂಪೊಂದು ಜೈಶ್ರೀರಾಮ್ ಘೋಷಣೆ ಕೂಗುತ್ತಾ, ನುಗ್ಗಿ ದಾಂಧಲೆ ನಡೆಸಿದ್ದಲ್ಲದೇ, ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡಲು ನಿಮಗೆ ಅನುಮತಿಸಿದ್ದು ಯಾರು ಎಂದು ಕೇಳಿ ಸಂಘಪರಿವಾರದ ಗೂಂಡಾಗಳು ದಾಂಧಲೆ ನಡೆಸಿದ್ದಾರೆ.

ವಿಶ್ವವಿದ್ಯಾಲಯದ ಹಾಸ್ಟೆಲ್‌ನ ‘ಎ’ ಬ್ಲಾಕ್‌ನಲ್ಲಿ ನಡೆದ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿಗಳ ಕೊಠಡಿಗೆ ಕಲ್ಲು ತೂರಾಟ ಮತ್ತು ದ್ವಿಚಕ್ರ ವಾಹನಗಳ ಮೇಲೆ ದಾಳಿ ಮಾಡುತ್ತಿರುವ ದೃಶ್ಯವನ್ನು ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ವಿಡಿಯೋ ಒಂದರಲ್ಲಿ ಕೇಸರಿ ಶಾಲು ಧರಿಸಿರುವ ವ್ಯಕ್ತಿಯೊಬ್ಬ, ವಿದ್ಯಾರ್ಥಿಗಳನ್ನು ನಿಂದಿಸುತ್ತಿರುವುದು ಮತ್ತು ಜೈಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ.

ಘಟನೆಯ ವೇಳೆ ಹಾಸ್ಟೆಲ್‌ನ ಸೆಕ್ಯೂರಿಟಿ ಗಾರ್ಡ್ ದಾಂಧಲೆ ನಡೆಸದಂತೆ ನಿಲ್ಲಲು ಗುಂಪನ್ನು ನಿಯಂತ್ರಿಸಲು ಯತ್ನಿಸಿದರೂ ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರೂ ಕೂಡ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳವುದಾಗಲೀ, ದಾಂಧಲೆ ನಡೆಸುತ್ತಿರುವುದನ್ನು ತಡೆಯುವುದಾಗಲೀ ಮಾಡಲಿಲ್ಲ ಎಂದು ವಿದೇಶಿ ಮುಸ್ಲಿಂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೇ, ಪೊಲೀಸರು ಸುಮ್ಮನೆ ನಿಂತು ನೋಡುತ್ತಿದ್ದ ದೃಶ್ಯವನ್ನೂ ಕೂಡ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಸಂಘಪರಿವಾರದ ಗೂಂಡಾಗಳ ಈ ದಾಳಿಯಿಂದ ಅಫ್ಘಾನಿಸ್ತಾನ, ತುರ್ಕಮೆನಿಸ್ತಾನ್, ಶ್ರೀಲಂಕಾ ಹಾಗೂ ಆಫ್ರಿಕಾದ ಒಟ್ಟು ಐವರು ಮುಸ್ಲಿಂ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ  ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಮತ್ತು ಕಾಂಗ್ರೆಸ್ ಮಾಜಿ ಶಾಸಕ ಗಯಾಸುದ್ದೀನ್ ಆಸ್ಪತ್ರೆಗೆ ಆಗಮಿಸಿ, ವಿದೇಶಿ ವಿದ್ಯಾರ್ಥಿಗಳಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು. ಘಟನೆಯ ಬಗ್ಗೆ ಎಲ್ಲ ವಿದೇಶಿ ವಿದ್ಯಾರ್ಥಿಗಳ ಸಂಬಂಧಪಟ್ಟ ರಾಯಭಾರಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ. ಆದರೆ, ದಾಳಿಕೋರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನು ಓದಿದ್ದೀರಾ? ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ಕೈಬಿಡಲು ಅಕ್ಕಯ್ ಪದ್ಮಶಾಲಿ ಮನವಿ

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದು, “ಮುಸ್ಲಿಂ ವಿರೋಧಿ ದ್ವೇಷವು ಭಾರತದ ಅಭಿಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಶಪಡಿಸುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...