62 ವರ್ಷಗಳ ನಂತರ ದೆಹಲಿ, ಮುಂಬೈ ನಗರಗಳಿಗೆ ಒಟ್ಟಿಗೆ ಆಗಮಿಸಿದ ಮುಂಗಾರು

Date:

ವಿಶೇಷ ಸಂದರ್ಭ ಎಂಬಂತೆ 62 ವರ್ಷಗಳ ನಂತರ ದೆಹಲಿ ಹಾಗೂ ಮುಂಬೈ ಮಹಾನಗರಗಳಿಗೆ ಮುಂಗಾರು ಮಳೆ ಒಟ್ಟಿಗೆ ಆಗಮಿಸಿದೆ. ಎರಡೂ ನಗರಗಳಿಗೂ ಜೂನ್‌ 21ರಂದು ಮುಂಗಾರು ಒಟ್ಟಿಗೆ ತಲುಪಿದ ಕಾರಣ ಭಾರೀ ಮಳೆ ಸುರಿದಿದೆ. 1961ರ ಜೂನ್ 21 ರಂದು ಮುಂಬೈ ಮತ್ತು ದೆಹಲಿಗೆ ಮುಂಗಾರು ಮಳೆ ಏಕಕಾಲಕ್ಕೆ ಆಗಮಿಸಿತ್ತು. ಎರಡು ನಗರಗಳು ಪರಸ್ಪರ 1,430 ಕಿಲೋಮೀಟರ್ ದೂರದಲ್ಲಿವೆ.

ರಾಷ್ಟ್ರ ರಾಜಧಾನಿ ದೆಹಲಿಗೆ ನಿಗದಿತ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ, ಮುಂಬೈಗೆ ಎರಡು ವಾರ ತಡವಾಗಿ ಪ್ರವೇಶಿಸುತ್ತದೆ ಎಂದು ಈ ಬಾರಿ ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? 16 ವರ್ಷದವರು ಲೈಂಗಿಕತೆಯ ಬಗ್ಗೆ ನಿರ್ಧರಿಸಬಲ್ಲರು ಎಂದ ಮೇಘಾಲಯ ಹೈಕೋರ್ಟ್; ಪೋಕ್ಸೋ ಎಫ್‌ಐಆರ್‌ ರದ್ದು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೈಋತ್ಯ ಮುಂಗಾರು ಈಗ ಸಕ್ರಿಯವಾಗಿದೆ. ಇದು ಮುಂಬೈ ಸೇರಿದಂತೆ ಇಡೀ ಮಹಾರಾಷ್ಟ್ರವನ್ನು ಆವರಿಸಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಹರಿಯಾಣ, ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮುವಿನ ಕೆಲವು ಭಾಗಗಳಲ್ಲಿಯೂ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಮಹಾನಿರ್ದೇಶಕ ಡಾ ಮೃತ್ಯುಂಜಯ್ ಮೊಹಾಪಾತ್ರ ಹೇಳಿದರು.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯು ಸುಡುವ ಶಾಖದಿಂದ ಬಿಡುವು ನೀಡಿದ್ದರೂ, ಗುರುಗ್ರಾಮದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮುಂಬೈ ಮತ್ತು ಸುತ್ತಮುತ್ತಲಿನ ಉಪನಗರಗಳಲ್ಲಿ ಕಳೆದ 24 ಗಂಟೆಗಳಲ್ಲಿ ಹೆಚ್ಚು ಮಳೆಯಾಗಿದೆ. ಇದರ ಪರಿಣಾಮವಾಗಿ  ಅಂಧೇರಿ, ಮಲಾಡ್ ಮತ್ತು ದಹಿಸರ್ ಪ್ರದೇಶಗಳು ಹೆಚ್ಚು ಹಾನಿಗೊಳಗಾಗಿವೆ.

ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಯಗಡ, ರತ್ನಗಿರಿ, ಪಾಲ್ಘರ್, ಮುಂಬೈ, ಥಾಣೆ ಮತ್ತು ಸಿಂಧುದುರ್ಗಕ್ಕೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ...

ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್...

ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ...