ಧರ್ಮಸ್ಥಳದಲ್ಲಿ ಮುಸ್ಲಿಂ ರಿಕ್ಷಾ ಚಾಲಕನ ಮೇಲೆ ಅನೈತಿಕ ಪೊಲೀಸ್‌ಗಿರಿ: ಮೂವರ ಬಂಧನ

Date:

ಹಿಂದೂ ವಿದ್ಯಾರ್ಥಿನಿಯೋರ್ವಳನ್ನು ರಿಕ್ಷಾದಲ್ಲಿ ಬಾಡಿಗೆಗೆ ಕರೆದುಕೊಂಡು ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತರ ತಂಡ ಹಲ್ಲೆ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಧರ್ಮಸ್ಥಳದ ನಿವಾಸಿಗಳಾದ ಅವಿನಾಶ್ (26), ನಂದೀಪ್ (20), ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್ (22) ಬಂಧಿತ ಆರೋಪಿಗಳು.

ಈ ಮೂವರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ, ಆಟೋ ಚಾಲಕ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಿದ್ದರು.

ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಯುವಕರ ತಂಡವೊಂದು “ನಿನಗೆ ಹಿಂದೂ ಯುವತಿಯರೆ ಬೇಕಾ” ಎಂದು ಬೆದರಿಕೆ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...