ಕರಾವಳಿ ತಾಯಿ-ಮಕ್ಕಳ ಕೊಲೆ ಪ್ರಕರಣ | ತನಿಖೆಗೆ ಐದು ತಂಡ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

  • ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ
  • ಜಿಲ್ಲಾ ಉಸ್ತುವಾರಿ ಸಚಿವರಿಂದ ಈಗ ಹೇಳಿಕೆ 

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಸಂಬಂಧ ನಿನ್ನೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕೊಲೆ ಘಟನೆ ನಡೆದು 24 ಗಂಟೆ ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಯಾವುದೇ ರೀತಿಯ ಹೇಳಿಕೆ ನೀಡದಿರುವುದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು. ಎಚ್ಚೆತ್ತುಕೊಂಡ ಸಚಿವೆ ಈ ಸಂಬಂಧ ಹೇಳಿಕೆ ನೀಡಿದ್ದಾರೆ.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಹಲವು ಗಣ್ಯರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಖಂಡಿಸಿ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಹೇಳಿಕೆ ನೀಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಗೆ ಭೇಟಿ ನೀಡದೇ, ಈವರೆಗೂ ಒಂದೂ ಹೇಳಿಕೆ ನೀಡದಿರುವುದಕ್ಕೆ ಟೀಕೆಗಳು ವ್ಯಕ್ತವಾಗಿದ್ದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

“ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ” ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ...

ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಲಿ; ಆದ್ರೆ ಇಬ್ಬರೂ ಪ್ರೀತಿ ಮಾಡ್ತಿದ್ದರು ಎಂಬುದು ಸತ್ಯ: ಕಣ್ಣೀರಿಟ್ಟ ಫಯಾಜ್‌ ತಾಯಿ ಮುಮ್ತಾಜ್

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ...