ಎಷ್ಟೇ ಸುರಕ್ಷತೆ ಇರಲಿ, ನಮ್ಮ ಒಬ್ಬ ಶೂಟರ್ ಸಾಕು: ಉದ್ಯಮಿ ಮುಖೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ

Date:

ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಮುಖೇಶ್ ಅಂಬಾನಿಗೆ ಮೂರನೇ ಬಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, 400 ಕೋಟಿ ರೂಪಾಯಿ ನೀಡುವಂತೆ ಇ-ಮೇಲ್ ಸಂದೇಶ ಬಂದಿರುವುದಾಗಿ ಮುಂಬೈ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಂಬಾನಿ ಕಂಪನಿಗೆ ಸೋಮವಾರ ಇ-ಮೇಲ್ ಬಂದಿದ್ದು, ಇದು ಕಳೆದ ನಾಲ್ಕು ದಿನಗಳಲ್ಲಿ ಅಂಬಾನಿಗೆ ಕಳುಹಿಸಲಾದ ಮೂರನೇ ಬೆದರಿಕೆ ಇ-ಮೇಲ್ ಸಂದೇಶ ಇದಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಕಳೆದ ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. ನೀಡಬೇಕು. ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮೊದಲ ಇ-ಮೇಲ್ ಬಂದಿತ್ತು. ನಂತರ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಗಾಮ್‌ದೇವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಶನಿವಾರ ಕಂಪನಿಗೆ 200 ಕೋಟಿ ರೂಪಾಯಿ ಬೇಡಿಕೆಯ ಇ-ಮೇಲ್ ಬಂದಿದೆ. ಸೋಮವಾರ ಮೂರನೇ ಇ-ಮೇಲ್ ಬಂದಿದ್ದು, ಅದನ್ನು ಕಳುಹಿಸಿದವರು ತಮ್ಮ ಹಣದ ಬೇಡಿಕೆಯನ್ನು ದ್ವಿಗುಣಗೊಳಿಸಿದ್ದಾರೆ. ಅಲ್ಲದೇ, ಅಂಬಾನಿಯವರಿಗೆ ಎಷ್ಟೇ ಸುರಕ್ಷತೆ ಇದ್ದರೂ ನಮ್ಮ ಒಬ್ಬ ಸ್ನೈಪರ್(ಗುರಿ ಇಟ್ಟು ಶೂಟ್ ಮಾಡುವ ಶೂಟರ್) ಸಾಕು. ನಮ್ಮ ಇ-ಮೇಲ್ ಅನ್ನು ಪೊಲೀಸರಿಗೆ ಪತ್ತೆ ಹಚ್ಚುವುದಕ್ಕೂ ಸಾಧ್ಯವಿಲ್ಲ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮುಂಬೈ ಪೊಲೀಸರು, ಅವರ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿವೆ’ ಎಂದು ಅವರು ಹೇಳಿದರು.

ಕಳೆದ ವರ್ಷ ಮುಂಬೈ ಪೊಲೀಸರು ಬಿಹಾರದ ದರ್ಭಾಂಗ್‌ನಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದರು. ಮುಂಬೈನ ಸರ್ ಎಚ್‌ ಎನ್ ರಿಲಾಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...