ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

Date:

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ, ಮುಂಬೈ ಇಂಡಿಯನ್ಸ್‌ ವಿರುದ್ಧ 9 ರನ್‌ಗಳಿಂದ ಸೋಲಿಗೆ ಶರಣಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್‌ ಗಳಿಸಿ, ಪಂಜಾಬ್ ಕಿಂಗ್ಸ್ ತಂಡಕ್ಕೆ 193 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್, 19.1 ಓವರ್‌ಗಳಲ್ಲಿ 183 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ 9 ರನ್‌ಗಳಿಂದ ಸೋಲುವ ಮೂಲಕ ಮುಖಭಂಗ ಅನುಭವಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂಬೈ ಇಂಡಿಯನ್ಸ್​ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಪಂಜಾಬ್​ ಕಿಂಗ್ಸ್​ ಮೊದಲ 4 ಓವರ್​ಗಳಲ್ಲೇ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಕ್ರೀಸ್​ಗೆ ಬಂದ ಶಂಶಾಕ್​ ಸಿಂಗ್​​ ​​ಕೇವಲ 25 ಬಾಲ್​​ನಲ್ಲಿ 41 ರನ್​​ ಸಿಡಿಸಿದ್ದರು. ಇವರಿಗೆ ಸಾಥ್​ ನೀಡಿದ ಆಶುತೋಷ್​​ ​ಶರ್ಮಾ, ಕೇವಲ 28 ಬಾಲ್​ನಲ್ಲಿ 7 ಸಿಕ್ಸರ್​​, 2 ಬೌಂಡರಿ ಸಹಿತ 61 ರನ್​ ಚಚ್ಚಿದರು. ಹರ್​ಪ್ರೀತ್ ಬ್ರಾರ್ 17 ರನ್​ ಗಳಿಸಿದರೂ ಕೂಡ, ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ ಕೊನೆಯಲ್ಲಿ 9 ರನ್​ನಿಂದ ಸೋತರು.

ಮುಂಬೈ ಇಂಡಿಯನ್ಸ್​ ಪರ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ಕೊಯೆಟ್‌ಝೀ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು. ಉಳಿದಂತೆ ಆಕಾಶ್ ಮಧ್ವಾಲ್, ಶ್ರೇಯಸ್ ಗೋಪಾಲ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯಾ ತಲಾ ಒಂದೊಂದು ವಿಕೆಟ್ ಗಳಿಸಿಕೊಂಡರು.

ಟಾಸ್​ ಸೋತರೂ ಮೊದಲು  ಬ್ಯಾಟಿಂಗ್​ ಮಾಡಿದ್ದ ಮುಂಬೈ ಇಂಡಿಯನ್ಸ್​ ಪರ ಸೂರ್ಯಕುಮಾರ್​ ಯಾದವ್​ ಭರ್ಜರಿ ಬ್ಯಾಟಿಂಗ್​ ಮಾಡಿದ್ದರು. ತಾನು ಆಡಿದ 53 ಬಾಲ್​ನಲ್ಲಿ 3 ಸಿಕ್ಸರ್​​, 7 ಬೌಂಡರಿ​ಯ ನೆರವಿನಿಂದ 78 ರನ್​ ಗಳಿಸಿ, ಮಿಂಚಿದರು. ಇವರಿಗೆ ಸಾಥ್​ ನೀಡಿದ ಮಾಜಿ ನಾಯಕ ರೋಹಿತ್​ ಶರ್ಮಾ 36, ತಿಲಕ್​ ವರ್ಮಾ 34, ಹಾರ್ದಿಕ್​ ಪಾಂಡ್ಯ 10, ಟೀಮ್​ ಡೇವಿಡ್​ 14 ರನ್​ ಗಳಿಸಿದರು. ಇವರೆಲ್ಲ ಬ್ಯಾಟಿಂಗ್‌ನ ನೆರವಿನಿಂದ ಮುಂಬೈ ಇಂಡಿಯನ್ಸ್​​ 192 ರನ್​​ ಗಳಿಸಿ, ಪಂಜಾಬ್‌ಗೆ ಸವಾಲಿನ ಗುರಿ ನೀಡಿತ್ತು.

ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಹರ್ಷಲ್ ಪಟೇಲ್ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಕಬಳಿಸಿದರು. ಸ್ಯಾಮ್ ಕರನ್ 4 ಓವರ್‌ಗಳಲ್ಲಿ 41 ರನ್ ನೀಡಿ 2 ವಿಕೆಟ್ ಪಡೆದರೆ, ಕಗಿಸೊ ರಬಾಡ ಒಂದು ವಿಕೆಟ್ ಪಡೆದಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...