ವಿದ್ಯಾಪೀಠದ ದೈನಂದಿನ ವ್ಯವಹಾರ ಹೊರತು ಬೇರೆ ನಿರ್ಧಾರ ಕೈಗೊಳ್ಳಬೇಡಿ: ಮುರುಘಾ ಶ್ರೀಗೆ ಹೈಕೋರ್ಟ್‌ ಸೂಚನೆ

Date:

“ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು” ಎಂದು ವಿದ್ಯಾಪೀಠದ ಅಧ್ಯಕ್ಷ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿದೆ.

ಪೋಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಮಠದ ಎಸ್‌ಜೆ‌ಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ಆಕ್ಷೇಪಿಸಿ ವಿದ್ಯಾಪೀಠದ ಆಡಳಿತ ಮಂಡಳಿ ನಿರ್ದೇಶಕ ಆರ್‌ ನಾಗರಾಜ್ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಹಾಜರಿದ್ದ ಮುರುಘಾ ಶರಣರ ಪರ ವಕೀಲರು, ವಿದ್ಯಾಪೀಠದ ನೀತಿ ನಿರ್ಧಾರದ ವಿಷಯದಲ್ಲಿ ಶರಣರು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಪೀಠಕ್ಕೆ ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹೇಳಿಕೆ ದಾಖಲಿಸಿಕೊಂಡ ಪೀಠವು, ಶರಣರು ವಿದ್ಯಾಪೀಠದ ನೀತಿ ನಿರ್ಧಾರ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬಾರದು. ಕೇವಲ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳಬಹುದು ಎಂದು ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶಿವಮೂರ್ತಿ ಮುರುಘಾ ಶರಣರು ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡಿದ್ದಾರೆ. ಆ ಮೂಲಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ಮಾಡಿರುವ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಪೀಠಕ್ಕೆ ತಿಳಿಸಿದರು.

ಇದನ್ನು ಓದಿ: ಗೋಮಾಂಸ ರುಚಿಯಾಗಿರಲು ಹಸುಗಳಿಗೆ ಡ್ರೈ ಫ್ರೂಟ್ಸ್‌ ತಿನ್ನಿಸಿ, ಬಿಯರ್‌ ಕುಡಿಸಿ: ಮಾರ್ಕ್‌ ಜುಕರ್‌ಬರ್ಗ್‌

ಆ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, “ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವಾಗ ಅಧಿಕಾರ ನಡೆಸಲು ಅಷ್ಟೊಂದು ಆತುರವೇಕೆ? ದೋಷಾರೋಪಗಳಿಂದ ಮುಕ್ತರಾಗುವ ತನಕ ದೂರ ಇರುವುದು ಒಳಿತಲ್ಲವೇ? ಜಿಲ್ಲಾ ಪ್ರಧಾನ ನ್ಯಾಯಾಧೀಶರು ಉಸ್ತುವಾರಿ ವಹಿಸುವಂತೆ ಇದೇ ಕೋರ್ಟ್‌ ಹೇಳಿತ್ತಲ್ಲವೇ? ಹಾಗೊಂದು ವೇಳೆ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಸಮರ್ಪಕವಾಗಿ ಕಾರ್ಯಭಾರ ಮಾಡುತ್ತಿಲ್ಲ ಎಂದಾದರೆ ಅದನ್ನು ನೋಡಿಕೊಳ್ಳಲು ಹೈಕೋರ್ಟ್‌ ಇಲ್ಲವೇ?” ಎಂದು ಪ್ರಶ್ನಿಸಿತು.

ಈ ವೇಳೆ ಶರಣ ಪರ ಹಾಜರಿದ್ದ ವಕೀಲರು, “ಶರಣರು ವಿದ್ಯಾಪೀಠ ನೀತಿ ನಿರೂಪಣೆಯ ವಿಷಯದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳವುದಿಲ್ಲ. ಈ ಕುರಿತು ಪೀಠಕ್ಕೆ ಭರವಸೆ ನೀಡುತ್ತೇನೆ” ಎಂದು ತಿಳಿಸಿದರು. ಅದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...