ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

Date:

  • ವೈರ್ ಮತ್ತು ಲಾಠಿಯಿಂದ ಹಲ್ಲೆ ಮಾಡಿದ ಆರೋಪಿಗಳು
  • ಮೂವರು ಆರೋಪಿಗಳ ಸುಳಿವು ಸಿಕ್ಕಿದೆ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು

ಹಿಂದು ಯುವತಿಯೊಂದಿಗೆ ಕಾಣಿಸಿಕೊಂಡ ಎಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸದ್ಯ ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಹಿಂದುತ್ವ ಕೋಮು ಸಂಘಟನೆಯಾದ ಬಜರಂಗದಳದ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.

ಮರೀಲ್ ಕಾಡುಮನೆ ನಿವಾಸಿ ಮಹಮ್ಮದ್ ಫಾರಿಶ್ ಹಲ್ಲೆಗೊಳಗಾದ ಯುವಕ. ಘಟನೆಯಲ್ಲಿ ಆತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೊಳಗಾದ ಮಹಮ್ಮದ್ ಫಾರಿಶ್ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರೂ ವಿದ್ಯಾರ್ಥಿಗಳು. ಅವರಿಬ್ಬರು ಜ್ಯೂಸ್ ಕುಡಿಯಲು ಅಂಗಡಿಗೆ ಹೋಗಿದ್ದರು. ಆಗ, ಅಲ್ಲಿಗೆ ಬಂದ ಪುಂಡರ ಗುಂಪೊಂದು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸದ್ಯ ಹಲ್ಲೆಗೊಳದಾಗ ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದ ಮೂವರ ಸುಳಿವು ಸಿಕ್ಕಿದೆ. ಅವರಲ್ಲಿ ಪ್ರದೀಪ್‌ ಎಂಬಾತನನ್ನು ಹಾಗೂ ಇನ್ನೊಬ್ಬನನ್ನು ಬಂಧಿಸಲಾಗಿದೆ. ಮೂರನೇ ಆರೋಪಿಯನ್ನು ಶೀಘ್ರವೇ ಬಂಧಿಸಲಿದ್ದೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವೃದ್ಧ ಸಾವು; ನಿಮ್ಹಾನ್ಸ್‌ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

“ನಾನು ಮತ್ತು ನನ್ನ ಸಹಪಾಠಿ ಜ್ಯೂಸ್ ಕುಡಿಯುತ್ತಿದ್ದ ವೇಳೆ ಅಲ್ಲಿಗೆ ಬಂದ ಪುತ್ತೂರಿನ ಐಟಿಐ ಕಾಲೇಜಿನ ಸುಮಾರು 15 ವಿದ್ಯಾರ್ಥಿಗಳು ನನ್ನ ಹೆಸರು ಕೇಳಿದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ಕೊಠಡಿ ಒಂದಕ್ಕೆ ಕರೆದೊಯ್ದರು. ಅಲ್ಲಿ ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು. ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು” ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಯುವಕ ವಿವರಿಸಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು...

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ...

ಮಾರ್ಚ್ 30ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ...