ಮಿಜೋರಾಂ ವಿಮಾನ ನಿಲ್ದಾಣದ ಬಳಿ ಮಯನ್ಮಾರ್ ವಿಮಾನ ಪತನ: 8 ಮಂದಿಗೆ ಗಾಯ

Date:

ಮಯನ್ಮಾರ್‌ ಸೇನೆಯ ವಿಮಾನ ಮಿಜೋರಾಂ ರಾಜಧಾನಿ ಐಜ್ವಾಲ್‌ ಬಳಿಯ ಲೆಂಗ್ಪಿಯು ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಪತನಕ್ಕೀಡಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ, ವಿಮಾನವು ಮಿಜೋರಾಂನಿಂದ ತನ್ನ ಸೈನಿಕರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ರನ್‌ವೇನಲ್ಲಿ ಜಾರಿದ ಪರಿಣಾಮ ಅಪಘಾತಕ್ಕೀಡಾಗಿದೆ. ಸಿಬ್ಬಂದಿಯು ಸೇರಿ 14 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ವಿಮಾನವು ಸಣ್ಣ ಗಾತ್ರದಾಗಿದ್ದು, ಪೈಲಟ್ ಒಳಗೊಂಡು 14 ಮಂದಿ ಪ್ರಯಾಣಿಸುತ್ತಿದ್ದರು. 8 ಮಂದಿ ಗಾಯಗೊಂಡು 6 ಮಂದಿ ಸುರಕ್ಷಿತರಾಗಿದ್ದಾರೆ. ಗಾಯಗೊಂಡವರನ್ನು ಲೆಗ್ಪು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಮಿಜೋರಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿಲ್ಲ. ಜನವರಿ 17ರ ನಂತರ ಮಯನ್ಮಾರ್ ಮಿಲಿಟರಿ ಶಿಬಿರದಲ್ಲಿ ಬಂಡುಕೋರರೊಂದಿಗೆ ಗುಂಡಿನ ದಾಳಿ ನಡೆದ ನಂತರ ಸುಮಾರು 276 ಮಯನ್ಮಾರ್ ಸೇನಾ ಸಿಬ್ಬಂದಿ ಮಣಿಪುರಕ್ಕೆ ದೌಡಾಯಿಸಿ ಆಶ್ರಯ ಪಡೆದಿದ್ದರು.

ನೆರೆಯ ದೇಶದ ಸೈನಿಕರು ಮಿಜೋರಾಂನ ಲಾಂಗ್ತಲೈ ಜಿಲ್ಲೆಯ ಬಂಡೂಕ್ಬಂಗ ಗ್ರಾಮಕ್ಕೆ ಪ್ರವೇಶಿಸಿದ್ದರು. ಮಯನ್ಮಾರ್‌ ಸೇನಾ ವಿಮಾನವು ಜ.22 ರಂದು ಲೆಂಗ್ಪಿಯು ವಿಮಾನ ನಿಲ್ದಾಣದಿಂದ ಎರಡು ತಂಡಗಳಾಗಿ ಕರೆದುಕೊಂಡು ಹೋಯಿತು. ಇಂದು ಬೆಳಗ್ಗೆ ಉಳಿದ 92 ಸೈನಿಕರನ್ನು ಕರೆದೊಯ್ಯಲು ವಿಮಾನ ಬಂದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...