ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಗೆ ನ್ಯಾಕ್‌ ತಂಡ ಭೇಟಿ

Date:

ರಾಷ್ಟ್ರೀಯ ಮೌಲ್ಯಾಂಕ ಮಾನ್ಯತಾ ಮಂಡಳಿ (ನ್ಯಾಕ್)ಯ ಉನ್ನತ ಮಟ್ಟದ ತಜ್ಞರ ತಂಡ ಡಿಸೆಂಬರ್ 21ರಿಂದ 23ರವರೆಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲಾ ತಿಳಿಸಿದ್ದಾರೆ.

“ಹರಿಯಾಣದ ಭಗತ್ ಫೂಲ್‌ಸಿಂಗ್ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ಸುದೇಶ್ ಚಿಕಾರಾ ಅವರ ನೇತೃತ್ವದಲ್ಲಿ ಏಳು ಮಂದಿ ತಜ್ಞರ ನ್ಯಾಕ್‌ ತಂಡವು ವಿಶ್ವವಿದ್ಯಾಲಯಕ್ಕೆ ಬರಲಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಹಾಗೂ ಸಿಂಧನೂರು ಮತ್ತು ಮಂಡ್ಯದಲ್ಲಿರುವ ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಅವರು ವಿವರಿಸಿದ್ದಾರೆ.

“ತಂಡ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ನಿರ್ದೇಶನಾಲಯಗಳು, ಅಧ್ಯಯನ ಕೇಂದ್ರಗಳು, ಮಹಿಳಾ ತಂತ್ರಜ್ಞಾನ ಪಾರ್ಕ್, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪ್ರಸಾರಾಂಗ, ಶಿಶುಪಾಲನಾ ಕೇಂದ್ರ, ವಸತಿ ನಿಲಯಗಳು, ಆಡಳಿತ ವಿಭಾಗ, ಶೈಕ್ಷಣಿಕ ವಿಭಾಗ, ಪರೀಕ್ಷಾ ವಿಭಾಗ, ಆರ್ಥಿಕ ವಿಭಾಗ, ಎಂಜನಿಯರಿಂಗ್ ವಿಭಾಗ, ಗ್ರಂಥಾಲಯ, ದೂರ ಶಿಕ್ಷಣ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ, ಕಂಪ್ಯೂಟರ್ ಕೇಂದ್ರ, ಕುಂದುಕೊರತೆ ನಿವಾರಣಾ ಘಟಕ, ರ್ಯಾಗಿಂಗ್ ತಡೆ ವಿಭಾಗ, ಸಿಡಿಸಿ, ಪಿಎಂಇ ಬೋರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ, ಸಮಾನ ಅವಕಾಶ ಘಟಕ, ವೃತ್ತಿ ಮಾರ್ಗದರ್ಶನ ಘಟಕ, ಸ್ವಾಮಿ ವಿವೇಕಾನಂದ ಕೇಂದ್ರ, ಕನಕದಾಸ ಅಧ್ಯಯನ ಕೇಂದ್ರ, ಮೌಲಾನಾ ಆಜಾದ್ ಅಧ್ಯಯನ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಗಾಂಧಿ ಅಧ್ಯಯನ ಕೇಂದ್ರ, ಮಹಿಳಾ ಅಧ್ಯಯನ ಕೇಂದ್ರ, ಭಾಸ್ಕರಾಚಾರ್ಯ ಅಧ್ಯಯನ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮ ಶೈಕ್ಷಣಿಕ ಕಾರ್ಯಕ್ಷಮತೆ ಕೋರ್ಸುಗಳಿಗೆ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ. ನಾವು ಕೆಲಸ ಹೊಸ ವಿಶಿಷ್ಟ ಕೋರ್ಸ್ ಗಳನ್ನು ಸಹ ಪ್ರಾರಂಭಿಸಿದ್ದೇವೆ. ಇವು ಉದ್ಯಮದೊಂದಿಗೆ ಸಂಪರ್ಕ ಹೊಂದಿವೆ ಮತ್ತು ಉತ್ತಮ ಪ್ರಕ್ರಿಯೆಯನ್ನು ಪಡೆಯುತ್ತಿವೆ. ಈಗಾಗಿ ಈ ಬಾರಿ ನ್ಯಾಕನಿಂದ ನಮಗೆ ಉತ್ತಮ ರಾಂಕ್ ಬರುವ ವಿಶ್ವಾಸವಿದೆ” ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...