ನೆಹರೂ ಹೆಸರಿನಿಂದಲ್ಲ, ಕೆಲಸದಿಂದ ಗುರುತಿಸಿದ್ದಾರೆ : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪರೋಕ್ಷ ಟಾಂಗ್

Date:

ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಈಗ ಕೇಂದ್ರ ಸರ್ಕಾರವು ಅಧಿಕೃತವಾಗಿ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಬದಲಾಯಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದ್ದು, ಸೋಮವಾರದಿಂದಲೇ ಜಾರಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಹೆಸರು ಬದಲಾವಣೆಯ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ, ‘ನೆಹರೂ ಅವರು ಹೆಸರಿನಿಂದ ಗುರುತಿಸಿಕೊಂಡಿಲ್ಲ. ಅವರು ತಮ್ಮ ಕೆಲಸ ಕಾರ್ಯದಿಂದ ಗುರುತಿಸಿಕೊಂಡಿದ್ದಾರೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಡಾಖ್‌ಗೆ ತೆರಳುವ ಮುನ್ನ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸುದ್ದಿ ಸಂಸ್ಥೆ ಎಎನ್‌ಐ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸರಳವಾಗಿ ಉತ್ತರಿಸಿದ ರಾಹುಲ್ ಗಾಂಧಿ, ‘ನೆಹರೂ ಜೀ ಕೀ ಪೆಹಚಾನ್ ಉನ್ಕೇ ಕರಮ್ ಹೇ, ಉನ್ಕಾ ನಾಮ್ ನಹೀ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ನವದೆಹಲಿಯ ತೀನ್ ಮೂರ್ತಿ ಭವನವು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ಆ ನಂತರ ಈ ಸಂಕೀರ್ಣವನ್ನು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಿ, ‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ’ ಎಂದು ನಾಮಕರಣ ಮಾಡಿ, ಸ್ಥಾಪಿಸಲಾಗಿತ್ತು. ಆದರೆ ಈಗ ನರೇಂದ್ರ ಮೋದಿ ಸರ್ಕಾರ, ‘ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ’ ಎಂದು ಬದಲಾಯಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇತಿಹಾಸ ಇಲ್ಲದವರು ಮತ್ತೊಬ್ಬರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ. ಹೆಸರು ಬದಲಿಸುವುದರಿಂದ ನೆಹರೂ ಅವರ ವ್ಯಕ್ತಿತ್ವವನ್ನು ಕುಗ್ಗಿಸಲು ಸಾಧ್ಯವಿಲ್ಲ’ ಎಂದು

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇತಿಹಾಸ ಇಲ್ಲದವರು ಮತ್ತೊಬ್ಬರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ ಹೆಸರು ಬದಲಿಸುವುದರಿಂದ ಪ್ರಧಾನಿ ವ್ಯಕ್ತಿತ್ವವನ್ನು ಕುಗ್ಗಿಸಲು ಸಾಧ್ಯವಿಲ್ಲ’ ಎಂದು ವಾಗ್ದಾಳಿ ನಡೆಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...

ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ...