ಏಕದಿನ ವಿಶ್ವಕಪ್ | ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಾಕ್‌ಗೆ ಬೃಹತ್ ಮೊತ್ತದ ಸವಾಲು ನೀಡಿದ ನ್ಯೂಝಿಲ್ಯಾಂಡ್

Date:

ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ ‘ಮಾಡು ಇಲ್ಲವೇ ಮಡಿ’ ಪಂದ್ಯದಲ್ಲಿ ಕಿವೀಸ್, ಪಾಕಿಸ್ತಾನಕ್ಕೆ ಗೆಲ್ಲಲು 402 ರನ್‌ಗಳ ಕಠಿಣ ಸವಾಲನ್ನು ನೀಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 35ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಝಿಲ್ಯಾಂಡ್, ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 401 ರನ್ ದಾಖಲಿಸಿತು.

ಟಾಸ್ ಗೆದ್ದುಕೊಂಡಿದ್ದರೂ ಮೊದಲಿಗೆ ಬೌಲಿಂಗ್ ಮಾಡುವ ಪಾಕ್ ನಾಯಕ ಬಾಬರ್ ಆಝಂ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾದ ಬೌಲರ್‌ಗಳು, ನ್ಯೂಝಿಲ್ಯಾಂಡ್ ಬ್ಯಾಟರ್‌ಗಳಿಂದ ಚಚ್ಚಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಮಿಂಚಿದ ರಚಿನ್ ರವೀಂದ್ರ ದಾಖಲೆ

ನ್ಯೂಝಿಲ್ಯಾಂಡ್‌ನ 23ರ ಹರೆಯದ ಎಡಗೈ ಬ್ಯಾಟರ್, ಭಾರತೀಯ ಮೂಲದ ರಚಿನ್ ರವೀಂದ್ರ ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಮಿಂಚಿದ್ದಾರೆ. ಪಾಕ್ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ.

ಇಂದಿನ ಪಂದ್ಯದಲ್ಲಿ ರಚಿನ್ ರವೀಂದ್ರ 94 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 15 ಬೌಂಡರಿಯ ನೆರವಿನಿಂದ 108 ರನ್ ಗಳಿಸಿ, ಮಿಂಚಿದರು. ಈ ಮೂಲಕ ಎರಡು ಹೊಸ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ತಮ್ಮ ಮೊದಲ ವಿಶ್ವಕಪ್‌ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದಲ್ಲದೇ, ಈ ಸಾಧನೆ ಮಾಡಿದ 2ನೇ ಆಟಗಾರನಾಗಿ ಹೊರಹೊಮ್ಮಿದರು. ಇದಕ್ಕೂ ಮುನ್ನ ಬೈರ್‌ಸ್ಟೋವ್ 2019ರ ವಿಶ್ವಕಪ್‌ನಲ್ಲಿ 532 ರನ್ ಗಳಿಸಿದ್ದರು. ಮತ್ತೊಂದೆಡೆ, 500ಕ್ಕೂ ಹೆಚ್ಚು ರನ್ ಗಳಿಸಿದ 2ನೇ ಕಿರಿಯ ಬ್ಯಾಟರ್ ಎಂಬ ದಾಖಲೆ ಬರೆದರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ 1996ರ ವಿಶ್ವಕಪ್‌ನಲ್ಲಿ 523 ರನ್ ಗಳಿಸಿದ್ದರು.

ಉತ್ತಮ ಆರಂಭ ಪಡೆದಿದ್ದ ನ್ಯೂಝಿಲ್ಯಾಂಡ್‌, ಡೆವೊನ್ ಕಾನ್ವೆ-ರವೀಂದ್ರ ಜೋಡಿ ಮೊದಲ ವಿಕೆಟ್‌ಗೆ 68 ರನ್‌ಗಳನ್ನು ಕೂಡಿ ಹಾಕಿತು. ಕಾನ್ವೆ 35 ರನ್ ಗಳಿಸಿದ್ದಾಗ ಹಸನ್ ಅಲಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್‌ಗೆ ಬಂದ ನಾಯಕ ಕೇನ್ ವಿಲಿಯಮ್ಸ್‌ ಕೂಡ ರವೀಂದ್ರ ಜೊತೆಗೆ ಉತ್ತಮ ಜೊತೆಯಾಟ ನೀಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 180 ರನ್‌ಗಳ ಜೊತೆಯಾಟ ನಡೆಸಿದರು.

ಗಾಯದಿಂದ ಚೇತರಿಸಿಕೊಂಡು ಇಂದಿನ ಪಂದ್ಯದಲ್ಲಿ ತಂಡ ಕೂಡಿಕೊಂಡಿದ್ದ ನಾಯಕ ಕೇನ್ ವಿಲಿಯಮ್ಸ್ 95 ರನ್ ಕೊಡುಗೆ ನೀಡಿದರು. 95 ರನ್ ಗಳಿಸಿದ್ದ ವೇಳೆ ಇಫ್ತಿಕಾರ್‌ಗೆ ಬೌಲಿಂಗ್‌ ಕ್ಯಾಚ್ ಔಟಾಗುವ ಮೂಲಕ, ಶತಕದಿಂದ ವಂಚಿತರಾದರು.

ನಂತರ ಬ್ಯಾಟಿಂಗ್‌ಗೆ ಬಂದ ಡರೆಲ್ ಮಿಚೆಲ್ 29, ಚಾಪ್ಟನ್ 39 ರನ್ ಬಾರಿಸಿದರೆ, ಕೊನೆಯಲ್ಲಿ ಗ್ಲೆನ್ ಫಿಲಿಫ್ಸ್ 41, ಮಿಚೆಲ್ ಸ್ಯಾಂಟನರ್ 26 ರನ್ ಬಾರಿಸಿದರು.

ಪಾಕಿಸ್ತಾನ ಪರ ಮೊಹಮ್ಮದ್ ವಾಸೀಂ 3 ವಿಕೆಟ್ ಪಡೆದರೆ ಹಸನ್ ಅಲಿ, ಇಪ್ಲಿಕಾರ್ ಅಹ್ಮದ್ ಹಾಗೂ ಹಾರಿಸ್ ತಲಾ ಒಂದು ವಿಕೆಟ್ ಕಬಳಿಸಿದರು. ಪ್ರಮುಖ ಬೌಲರ್ ಶಾಹೀನ್ ಶಾ ಅಫ್ರಿದಿ 10 ಓವರ್‌ಗಳಲ್ಲಿ 90 ರನ್ ನೀಡಿ, ದುಬಾರಿಯಾದರು.

ಎರಡೂ ತಂಡಕ್ಕೂ ಗೆಲುವು ಅನಿವಾರ್ಯ

ಸತತ ನಾಲ್ಕು ಗೆಲುವುಗಳ ಬಳಿಕ ‘ಹ್ಯಾಟ್ರಿಕ್’ ಸೋಲಿನಿಂದ ಕಂಗೆಟ್ಟಿರುವ ನ್ಯೂಝಿಲ್ಯಾಂಡ್ ತಂಡ ಒಂದೆಡೆಯಾದರೆ, ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತು ಮೂರರಲ್ಲಿ ಗೆದ್ದು ಕೇವಲ ಆರು ಅಂಕ ಗಳಿಸಿರುವ ಪಾಕಿಸ್ತಾನ ತಂಡಕ್ಕೂ ಕೂಡ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ‘ಮಾಡು ಇಲ್ಲವೇ ಮಡಿ’ ಪಂದ್ಯದಲ್ಲಿ ಯಾವ ತಂಡ ಸೆಮಿಫೈನಲ್‌ ಪ್ರವೇಶದ ಸಾಧ್ಯತೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ ಎಂದು ಕಾದುನೋಡಬೇಕಿದೆ. ಈ ಎಲ್ಲ ಲೆಕ್ಕಾಚಾರಗಳ ನಡುವೆ ಅಫ್ಘಾನಿಸ್ತಾನ ತಂಡ ಕೂಡ ನಿನ್ನೆ ಲಕ್ನೋದಲ್ಲಿ ನಡೆದ ನೆದರ್‌ಲ್ಯಾಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ತಾನೂ ಕೂಡ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಒಂದು ವೇಳೆ ಪಾಕಿಸ್ತಾನ ಇಂದಿನ ಪಂದ್ಯದಲ್ಲಿ ಸೋತರೆ ಅಫ್ಘಾನಿಸ್ತಾನದ ಆಸೆ ಮತ್ತಷ್ಟು ಚಿಗುರಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...