ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು: ಹೈಕೋರ್ಟ್‌

Date:

“ಮಾಲ್‌ ಆಫ್‌ ಏಷ್ಯಾಗೆ ಇಷ್ಟು ದಿನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದು ಏಕೆ? ಸಾರ್ವಜನಿಕರನ್ನು ಮಾಲ್​ಗೆ ನಿರ್ಬಂಧಿಸುವುದು ಪರಿಹಾರವೇ? ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ. ಜನವರಿ 2 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಅಲ್ಲಿಯವರೆಗೂ ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು” ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ (ಬಳ್ಳಾರಿ ರಸ್ತೆ) ಮಾಲ್‌ ಆಫ್‌ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಸರ್ಕಾರದ ಈ ಕ್ರಮದ ಬಗ್ಗೆ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್​ ಲಿಮಿಟೆಡ್​ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದೆ.

ಈ ರಿಟ್​​ ಅರ್ಜಿಯನ್ನು ಏಕಸದಸ್ಯ ಪೀಠ ನ್ಯಾ. ಎಂ.ಜಿ.ಎಸ್. ಕಮಲ್ ಅವರು ವಿಚಾರಣೆ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಮಾಲ್‌ಗೆ ಸಾರ್ವಜನಿಕರ ನಿರ್ಬಂಧ ಮಾಡುವುದರಿಂದ ಪರಿಹಾರ ದೊರೆಯುತ್ತದೆಯೇ? ಇನ್ನು ಮಾಲ್‌ನಲ್ಲಿ ಆವುದೇ ರೀತಿಯ ಧಾರ್ಮಿಕ ಪ್ರವಚನಗಳು ನಡೆಯುತ್ತಿಲ್ಲ. ಸರ್ಕಾರದ ಆದೇಶ ಸ್ಪಷ್ಟವಾಗಿರಬೇಕು. ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ ಎಂದು ನ್ಯಾಯಾಲಯ ಸೂಚಿಸಿದೆ.

ಅಕ್ಟೋಬರ್ ತಿಂಗಳಿನಿಂದ ಮಾಲ್ ಕಾರ್ಯಾಚರಣೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...