ಮತ್ತೆ ಆಪರೇಶನ್ ಕಮಲ | ಬಿಎಸ್‌ವೈ ಆಪ್ತನಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಮಿಷ: ಶಾಸಕ ರವಿ ಗಣಿಗ ಆರೋಪ

Date:

  • ‘ಬಿಜೆಪಿಯ ತಂಡಗಳು ಮತ್ತೊಮ್ಮೆ ಆಪರೇಶನ್ ಕಮಲಕ್ಕೆ ಮುಂದಾಗಿವೆ’
  • ‘ಸಂತೋಷ್ ಆಡಿರುವ ಮಾತುಗಳ ಆಡಿಯೋ, ವಿಡಿಯೋ ನನ್ನ ಬಳಿಯಿದೆ’

ಹಿಂದೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಯಶ ಕಂಡಿದ್ದ ಬಿಜೆಪಿಯ ತಂಡಗಳು ಮತ್ತೊಮ್ಮೆ ಆಪರೇಶನ್ ಕಮಲಕ್ಕೆ ಮುಂದಾಗಿವೆ. ಕಾಂಗ್ರೆಸ್‌ನ ನಾಲ್ಕು ಶಾಸಕರಿಗೆ 50 ಕೋಟಿ ರೂ. ಹಣದ ಜೊತೆಗೆ ಮಂತ್ರಿ ಸ್ಥಾನದ ಆಮಿಷ ಒಡ್ಡುತ್ತಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಿಂದೆ ಬಿ ಎಸ್‌ ಯಡಿಯೂರಪ್ಪನವರ ಆಪ್ತ ಕಾರ್ಯದರ್ಶಿಯಾಗಿದ್ದ ಎನ್ ಆರ್ ಸಂತೋಷ್ ಒಂದು ತಂಡದ ನೇತೃತ್ವ ವಹಿಸಿ ಕಾಂಗ್ರೆಸ್‌ನ ನಾಲ್ವರು ಶಾಸಕರನ್ನು ಹೋಟೆಲ್ ಒಂದರಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾನೆ” ಎಂದು ರವಿ ದೂರಿದ್ದಾರೆ.

“ಜೆಡಿಎಸ್ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಇವನಿಗೆ ಬುದ್ಧಿ ಬಂದಿಲ್ಲ. ಕಾಂಗ್ರೆಸ್ ಶಾಸಕರಿಗೆ ರೂ. 50 ಕೋಟಿ ಹಾಗೂ ಮಂತ್ರಿ ಸ್ಥಾನ ನೀಡುವ ಆಮಿಷವನ್ನು ಸಂತೋಷ್ ಒಡ್ಡಿದ್ದಾನೆ. ಶಾಸಕರನ್ನು ವಿಮಾನಗಳಲ್ಲಿ ದೆಹಲಿಗೆ ಕಳಿಸುವ ಮತ್ತು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರಿಗಾಗಿ ಹಿಂದೂಗಳ ಟಾರ್ಗೆಟ್, ನವಿಲುಗರಿ ಬಳಸುವ ಮೌಲ್ವಿಗಳ ಮೇಲೇಕೆ ಕ್ರಮವಿಲ್ಲ: ಬೆಲ್ಲದ್‌

“ಸಂತೋಷ್ ಆಡಿರುವ ಮಾತುಗಳ ಆಡಿಯೋ ಮತ್ತು ವಿಡಿಯೋ ಕ್ಲಿಪ್ಪಿಂಗ್‌ಗಳು ತಮ್ಮಲ್ಲಿದ್ದು ಅವುಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗ ಪಡಿಸುವೆ. ಯಾರಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...