ಪಾಕಿಸ್ತಾನ | ಮೇ 14ಕ್ಕೆ ಪಂಜಾಬ್ ಪ್ರಾಂತ್ಯ ಚುನಾವಣೆ; ಸುಪ್ರೀಂಕೋರ್ಟ್ ಆದೇಶ

Date:

  • ಪಾಕಿಸ್ತಾನ ಚುನಾವಣೆ ವಿಳಂಬ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಟಿಐ ಅರ್ಜಿ
  • ಲಭ್ಯವಿರುವ ನಿಧಿಯ ಬಗ್ಗೆ ಏಪ್ರಿಲ್‌ 11ರಂದು ವರದಿ ಸಲ್ಲಿಸಲು ಸೂಚನೆ

ಹೆಚ್ಚು ಜನಸಂಖ್ಯೆ ಹೊಂದಿರುವ ಪಾಕಿಸ್ತಾನ ದೇಶದ ಪಂಜಾಬ್‌ ಪ್ರಾಂತ್ಯದಲ್ಲಿ ಮೇ 14ರಂದು ಕ್ಷಿಪ್ರ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ (ಏಪ್ರಿಲ್‌ 4) ಆದೇಶಿಸಿದೆ.

ದೇಶದ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ವಿಳಂಬಗೊಳಿಸುವ ಚುನಾವಣಾ ಆಯೋಗದ ನಿರ್ಧಾರ ಅಸಂವಿಧಾನಿಕ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಚುನಾವಣೆ ವಿಳಂಬಗೊಂಡಿರುವ ಸಂಬಂಧ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪ್ರಮುಖ ಪ್ರತಿಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್‌ (ಪಿಟಿಐ) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರ್ಥಿಕ ಬಿಕ್ಕಟ್ಟನ್ನು ಉಲ್ಲೇಖಿಸಿ ಪಂಜಾಬ್ ಚುನಾವಣೆಯನ್ನು ನಡೆಸಲು ಸರ್ಕಾರವು ಹಣ ನೀಡಲು ನಿರಾಕರಿಸಿತ್ತು. ನಂತರ ಏಪ್ರಿಲ್ 30ರಿಂದ ಅಕ್ಟೋಬರ್ 8ರ ವರೆಗೆ ಚುನಾವಣೆ ಮುಂದೂಡುವ ಪಾಕಿಸ್ತಾನದ ಚುನಾವಣಾ ಆಯೋಗದ (ಇಸಿಪಿ) ನಿರ್ಧಾರವನ್ನು ಪ್ರಶ್ನಿಸಿ, ಇಮ್ರಾನ್‌ ಖಾನ್‌ ಅವರ ಪಿಟಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಎರಡು ಪ್ರಾಂತ್ಯಗಳಲ್ಲಿ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಪಂಜಾಬ್ ಚುನಾವಣಾ ದಿನಾಂಕವನ್ನು ವಿಳಂಬಗೊಳಿಸುವ ಮೂಲಕ ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಸಂವಿಧಾನವು ಪಾಕಿಸ್ತಾನ ಚುನಾವಣಾ ಆಯೋಗಕ್ಕೆ ಚುನಾವಣೆಗಳನ್ನು ಮುಂದೂಡುವ ಅಧಿಕಾರ ನೀಡುವುದಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಚುನಾವಣೆ ನಡೆಸುವ ಕುರಿತು ಸೂಕ್ತ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಚುನಾವಣೆಗಾಗಿ ಏಪ್ರಿಲ್ 10ರೊಳಗೆ ₹20 ಶತಕೋಟಿ ಬಿಡುಗಡೆ ಮಾಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ವೆಚ್ಚಕ್ಕೆ ಲಭ್ಯವಿರುವ ನಿಧಿಯ ಬಗ್ಗೆ ವರದಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಗಡುವು ನೀಡಿದೆ.

ನಿಗದಿತ ಸಮಯಕ್ಕಿಂತ ಮುಂಚಿತವಾಗಿ ರಾಷ್ಟ್ರೀಯ ಚುನಾವಣೆ ನಡೆಸಲು ಕಳೆದ ಜನವರಿಯಲ್ಲಿ ಪಿಟಿಐ ಪಕ್ಷ ತಾನು ಅಧಿಕಾರದಲ್ಲಿರುವ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತೀಯ ವಿಧಾನಸಭೆಗಳನ್ನು ವಿಸರ್ಜಿಸಿತು.

ಇದರಿಂದ ಇಮ್ರಾನ್‌ ಖಾನ್‌ ಅಧಿಕಾರ ಕಳೆದುಕೊಂಡರು. ಆಗಿನಿಂದ ಇಮ್ರಾನ್‌ ಅವರ ಪಿಟಿಐ ಚುನಾವಣೆಗೆ ಒತ್ತಾಯಿಸುತ್ತಿದೆ.

ಪಾಕಿಸ್ತಾನ ದೇಶದಲ್ಲಿ ರಾಷ್ಟ್ರೀಯ ಹಾಗೂ ಪ್ರಾಂತೀಯ ಚುನಾವಣೆಗಳನ್ನು ಒಟ್ಟಿಗೆ ಮಾಡುತ್ತದೆ. ಶಾಸಕಾಂಗ ಸಭೆಯನ್ನು ವಿಸರ್ಜಿಸಿದ 90 ದಿನಗಳಲ್ಲಿ ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗ ಸಂವಿಧಾನಕ್ಕೆ ಬದ್ಧವಾಗಿದೆ.

ಈ ಸುದ್ದಿ ಓದಿದ್ದೀರಾ? ಬಾಂಗ್ಲಾದೇಶದಲ್ಲಿ ವಿವಾದ ಸೃಷ್ಟಿಸಿರುವ ಅದಾನಿ ವಿದ್ಯುತ್ ಒಪ್ಪಂದ

ಇಮ್ರಾನ್‌ ನೇತೃತ್ವದ ಪಿಟಿಐ ಚುನಾವಣೆ ನಡೆಸಲು ಒತ್ತಾಯಿಸಿದರೂ ಚುನಾವಣೆಯ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ನಿರಾಕರಿಸಿತ್ತು.

ಕಳೆದ ತಿಂಗಳು ಪಾಕಿಸ್ತಾನ ಚುನಾವಣೆ ಆಯೋಗವು ಪಂಜಾಬ್ ಚುನಾವಣೆಯನ್ನು ಏಪ್ರಿಲ್ 30ರಂದು ನಡೆಸುವುದಾಗಿ ಘೋಷಿಸಿತ್ತು. ಆದರೆ ಮಾರ್ಚ್ 22 ರಂದು ಅದು ವೇಳಾಪಟ್ಟಿ ಹಿಂತೆಗೆದುಕೊಂಡಿತು. ಅಕ್ಟೋಬರ್ 8ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಿಸಿತು. ಇದನ್ನು ಪ್ರಶ್ನಿಸಿ ಇಮ್ರಾನ್‌ ನೇತೃತ್ವದ ಪಿಟಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...