54 ಸಾವಿರ ಅಭ್ಯರ್ಥಿಗಳು ಹಾಜರು; ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆದ ಪಿಎಸ್‌ಐ ಮರು ಪರೀಕ್ಷೆ

Date:

ಕೋಟ್ಯಂತರ ರೂ.ಗಳ ಅಕ್ರಮ ವ್ಯವಹಾರ ನಡೆದು ರದ್ದಾಗಿದ್ದ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳ ಮರುಪರೀಕ್ಷೆಯು ಮಂಗಳವಾರ ಬೆಂಗಳೂರು ನಗರದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ನಡೆಸಲಾಗಿದೆ.

ಬೆಂಗಳೂರಿನ ವಿವಿಧೆಡೆಗಳ 117 ಕೇಂದ್ರಗಳಲ್ಲಿ ಪರೀಕ್ಷೆಯು ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ನಡುವೆ, ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ನಡೆಯಿತು.

ಪರೀಕ್ಷೆಗೆ ಸುಮಾರು 54 ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದು ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಆಸ್ಪದ ಕೊಡಬಾರದೆಂಬ ಕಾರಣಕ್ಕೆ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜಿಸಲಾಗಿದೆ. 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

545 ಮಂದಿ ಪಿಎಸ್ಐ ಹುದ್ದೆಗಳಿಗಾಗಿ ಮರು ಪರೀಕ್ಷೆ ನಡೆದ ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು.

ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಯಿತು, ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯ ಮಾಡಿ ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ನಿಷೇಧಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಪಿಎಸ್ಐ ಅಕ್ರಮದ ವರದಿ ಕುರಿತು ಸಿಎಂ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ.‌ ಜಿ. ಪರಮೇಶ್ವರ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಶರ್ಟ್ ಅಥವಾ ಪ್ಯಾಂಟ್‌ಗಳಿಗೆ ಜಿಪ್ ಪ್ಯಾಕೆಟ್‌ಗಳು, ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಹಾಲ್‌ಗೆ ಶೂ ಹಾಕಿಕೊಂಡು ಹೋಗುವಂತಿಲ್ಲ. ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚಿಸಲಾಗಿತ್ತು.

ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್ ಇರುವಂತಿಲ್ಲ. ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಹಾಲ್‌ಗೆ ತರದಂತೆ ನೋಡಿಕೊಳ್ಳಲಾಗಿತ್ತು.

ಯಾವುದೇ ರೀತಿಯಾದ ಆಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಬದಲಿಗೆ ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್‌ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ. ಹ್ಯಾಟ್, ಮಾಸ್ಕ್ ಧರಿಸದಂತೆ ಸೂಚನೆ ನೀಡಲಾಗಿತ್ತು.

ಪ್ರವೇಶ ಪತ್ರ, ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗದಂತೆ ನಿಗಾ ವಹಿಸಲಾಗಿತ್ತು.

ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಿ ದೊಡ್ಡ ದೊಡ್ಡ ಡಿಸೈನ್, ಬಟನ್, ಹೂಗಳು ಇರುವ ಬಟ್ಟೆ ಧರಿಸುವಂತಿಲ್ಲ. ಪೂರ್ಣ ತೋಳಿನ ಬಟ್ಟೆ ಬಳಸದಂತೆ, ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ, ಟಾಪ್ ಬಳಸಲು ಸೂಚನೆ ನೀಡಿ ಅದರಂತೆ ಕ್ರಮ ಕೈಗೊಳ್ಳಲಾಗಿತ್ತು.

ಹೈ ಹೀಲ್ಸ್ ಚಪ್ಪಲಿ-ಶೂ ನಿಷೇಧ ಹೇರಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೂ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ ಕೊಡಲಾಗಿದ್ದು, ಮಂಗಳ ಸೂತ್ರ, ಕಾಲುಂಗುರ ಮಾತ್ರ ಬಳಸಲು ಅನುಮತಿ ನೀಡಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...