ಮತ್ತೆ ಕೋವಿಡ್ ಆತಂಕ | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್​-1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹಾಗಾಗಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತನಾಡಿದ ಅವರು, “60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಹೃದಯ ಸಂಬಂಧಿ ಸಮಸ್ಯೆ ಇದ್ದವರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ” ಎಂದು ತಿಳಿಸಿದರು.

“ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೇರಳದಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ. ಶೀತ, ಜ್ವರ, ಕೆಮ್ಮು ಇರುವವರು ಕೋವಿಡ್ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಇನ್ನೂ 2-3 ದಿನಗಳಲ್ಲಿ ಅದರ ತೀವ್ರತೆ ಗೊತ್ತಾಗಲಿದೆ. ಗುಂಪಿನಲ್ಲಿ ಓಡಾಟ ಮಾಡಬೇಡಿ” ಎಂದು ಆರೋಗ್ಯ ಸಚಿವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

“ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ, ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಕೇರಳದಿಂದ ಬರುವವರನ್ನು ಪರೀಕ್ಷೆ ಮಾಡುವಂತೆ ಆದೇಶ ಮಾಡಿದ್ದೇವೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...

ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ: ಪ್ರಲ್ಹಾದ್‌ ಜೋಶಿ

ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ...