“ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದೀಗ ಎರಡೂ ಪಕ್ಷಗಳು ಒಟ್ಟಾಗಿ ಸೇರಿವೆ. ನೀರು ಬಿಡದಂತೆ ನಮ್ಮ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ಮಾಡಬೇಕಿದೆ” ಎಂದರು.
“ಸರ್ಕಾರ ನಮ್ಮ ನಾಡಿನ ಜನರ ರಕ್ಷಣೆಗೆ ಮುಂದಾಗಬೇಕು. ಸುಪ್ರೀಂ ಕೋರ್ಟ್‌ಗೆ ಹೋಗುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಬೇಕು. ನೀರು ಹಂಚಿಕೆ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಕಾವೇರಿ, ಮಹದಾಯಿ, ಹೇಮಾವತಿ ರಕ್ಷಣೆ ಹಾಗೂ ಎಲ್ಲ ಸಮಸ್ಯೆಗಳ ತಾರ್ಕಿಕ ಅಂತ್ಯಕ್ಕೆ ಬದ್ಧರಾಗಿದ್ದೇವೆ” ಎಂದು ತಿಳಿಸಿದರು.
“ಮೆಟ್ಟೂರು ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಪ್ರಸ್ತುತ 11 ಟಿಎಂಸಿ ನೀರು ಇರುವ ಬಗ್ಗೆ ಮಾಹಿತಿ ಇದೆ. ತಮಿಳುನಾಡಿನ ಮೆಟ್ಟೂರಿನಿಂದ 6500 ಕ್ಯೂಸೆಕ್ ಹೊರಹರಿವು ಇದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 10,000 ಕ್ಯೂಸೆಕ್ ನೀರು ಒಳಹರಿವು ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈ ವಿಚಾರಗಳನ್ನು ತಿರುಗಿಸುವ ಕೆಲಸ ಮಾಡುತ್ತಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ; ಸರ್ಕಾರ ಕ್ರಮ ವಿರೋಧಿಸಿ ಪ್ರತಿಭಟನೆ
“ಸೆ.29 ರಂದು ನಡೆಯುವ ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ದಸರಾ ಹಬ್ಬದ ಬಳಿಕ ಬಿಜೆಪಿ, ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.
ಪ್ರಧಾನಿ ಪ್ರವೇಶಿಸಿದರೆ ನಿಮಗೆ ಕೆಲಸವಿಲ್ಲದಾದೀತು.