ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Date:

  • ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆ
  • ಸುರ್ಜೇವಾಲಾ, ಡಿಕೆ ಶಿವಕುಮಾರ್ ಭಾಗಿ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಇತ್ತ ಕಾಂಗ್ರೆಸ್‌ ನಲ್ಲಿ ಫಲಿತಾಂಶಕ್ಕೂ ಮುನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಇಂದು ಸಂಜೆ ಸುರ್ಜೇವಾಲಾ ಅವರು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕೂಡ ಭಾಗಿಯಾಗುವ ಸಾಧ್ಯತೆ ಇದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈಗಾಗಲೇ ಸುರ್ಜೇವಾಲಾ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ. ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದರೂ ಬಿಜೆಪಿ ನಾಯಕರು ಮಾತ್ರ ಫಲಿತಾಂಶ ಬೇರೆಯೇ ಇರಲಿದೆ ಎಂದು ಬಲವಾಗಿ ಹೇಳುತ್ತಿರುವುದು ಕಾಂಗ್ರೆಸ್‌ ನಾಯಕರನ್ನು ಚಿಂತೆಗೆ ಹಚ್ಚಿದೆ.

ಅದರಲ್ಲೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಟ್ವೀಟ್‌ ಮಾಡಿ ಎಲ್ಲ ಎಕ್ಸಿಟ್‌ ಪೋಲ್‌ಗಳನ್ನು ಅಲ್ಲಗಳೆದಿದ್ದು, ಸುಮಾರು 31 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮ್ಯಾಜಿಕ್‌ ನಂಬರ್‌ 113 ಮುಟ್ಟದೇ ಇದ್ದಲ್ಲಿ ಮುಂದಿನ ನಿರ್ಧಾರಗಳು ಏನು? ಬಹುಮತ ಸಾಧಿಸಿದಲ್ಲಿ ಶಾಸಕಾಂಗ ಪಕ್ಷದ ನಾಯಕ ಯಾರು? ರೆಸಾರ್ಟ್‌ ರಾಜಕಾರಣ ನಡೆದರೆ ಹೇಗೆ? ಎಂಬಿತ್ಯಾದಿ ಸಂಗತಿಗಳನ್ನು ಇಂದು ಕಾಂಗ್ರೆಸ್‌ ನಾಯಕರು ಚರ್ಚಿಸುವ ಸಾಧ್ಯತೆ ಇದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...