ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್‌ ನಿವೃತ್ತಿ, ಸಿದ್ದಲಿಂಗ ಸ್ವಾಮೀಜಿ ನೇಮಕ

Date:

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಭಾನುವಾರ ಪ್ರಮೋದ್ ಮುತಾಲಿಕ್ ನಿವೃತ್ತಿ ಘೋಷಿಸಿದರು.

ಶ್ರೀರಾಮಸೇನೆಯ ರಾಜ್ಯಾಧ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ತೆರುವಾದ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ‌ಸ್ಥಾನಕ್ಕೆ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಪ್ರಮೋದ್ ಮುತಾಲಿ ಘೋಷಣೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿತ್ತೋ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಹಿನಾಯವಾಗಿ ಸೋಲು ಅನುಭವಿಸಿದಾಗ ಬಿಜೆಪಿಗೆ ಕಾರ್ಯಕರ್ತರು ಮತ್ತು ಹಿಂದುತ್ವದ ಬೆಲೆ ಗೊತ್ತಾಗಿದೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರು ವಿಡಿಯೋ ಮಾಡುತ್ತಿದ್ದಾರೆ. ಅದು ಮಕ್ಕಳ ಆಟ ಎಂದು ಗೃಹ ಸಚಿವರು ಹೇಳುತ್ತಿದ್ದಾರೆ. ಒಂದು ವೇಳೆ ಹಿಂದೂಗಳ‌ ಮೇಲೆ ಆಗುತ್ತಿರುವ ಅನ್ಯಾಯ ಮಕ್ಕಳಾಟ ಆಗಿದ್ರೆ. ಇಂದಿರಾ ಗಾಂಧಿಯನ್ನು ಕೊಲೆ ಮಾಡಿದ್ದು ಕೂಡ ಮಕ್ಕಳಾಟ ಎನ್ನಬಹುದಲ್ವೇ ಎಂದು” ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿದ್ಧಲಿಂಗ ಸ್ವಾಮಿ ಪ್ರಶ್ನಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...

ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು...