ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

Date:

  • ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್‌
  • ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು

ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಹಾಲಿ ಶಾಸಕ ಬೆಂಬಲಿಗರ ಸಭೆ ನಡೆಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕುತ್ತಿದೆ. ಪಕ್ಷದ ಅನೇಕ ನಾಯಕರು ಟಿಕೆಟ್‌ ವಿಚಾರವಾಗಿ ಸಿಡಿಮಿಡಿಗೊಂಡು ಅನ್ಯ ಪಕ್ಷಗಳೆಡೆಗೆ ಮುಖ ಮಾಡಿದರೆ, ಮತ್ತೊಂದೆಡೆ ಕೆಲವರು ಸ್ವಪಕ್ಷದ ಅಭ್ಯರ್ಥಿಗಳ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮಾಜಿ ಸಚಿವ, ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ ಎಸ್ ಎ ರಾಮ​ದಾಸ್​​ ಅವರಿಗೆ ಟಿಕೆಟ್​ ಕೈ ತಪ್ಪಿದೆ. ಈ ವಿಚಾರವಾಗಿ ಅವರು ಬೆಂಬಲಿಗರ ಸಭೆ ಕರೆದಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮತ್ತು ಸಂಸದ ಪ್ರತಾಪ್ ಸಿಂಹ, ರಾಮದಾಸ್‌ ಅವರ ಮನವೊಲಿಸಲು ಅವರ ನಿವಾಸಕ್ಕೆ ತೆರಳಿದ್ದರು. ಅಲ್ಲಿ ರಾಮದಾಸ್ ಅಭಿಮಾನಿಗಳು ಭೇಟಿಗೆ ಅವಕಾಶ ನೀಡದೆ ಬರಿಗೈಲಿ ವಾಪಸ್ ಕಳುಹಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಸಂಧಾನ ಯತ್ನ ವಿಫಲವಾಗಿದ್ದು, ಕೊನೆಗೆ ರಾಮದಾಸ್ ಭೇಟಿಯೂ ಸಾಧ್ಯವಾಗದೆ ಮನೆಗೆ ಹಿಂತಿರುಗಿ ಮುಖಭಂಗ ಎದುರಿಸಿದ್ದಾರೆ.

ಮೈಸೂರಿನ ವಿದ್ಯಾರಣ್ಯಪುರಂ ನಿವಾಸದಲ್ಲಿ ಮಾತನಾಡಿದ ರಾಮದಾಸ್‌, “30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಆ ಮನೆಯಲ್ಲಿ ಇರಬೇಕಾ? ಬೇಡವಾ? ಎಂದು ನಾಳೆ ಸಂಜೆ ತಿಳಿಸುತ್ತೇನೆ” ಎಂದು ಪಕ್ಷ ಬಿಡುವ ಸುಳಿವು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ರಾಮದಾಸ್​​ ಅಭಿಮಾನಿಗಳ ಕಣ್ಣೀರು

ರಾಮದಾಸ್‌ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕರ ವಿದ್ಯಾರಣ್ಯಪುರಂ ನಿವಾಸದಲ್ಲಿ ಸಭೆ ಸೇರಿದ್ದ ಬೆಂಬಲಿಗರು, ಕಾರ್ಯಕರ್ತರು ಕಣ್ಣೀರು ಹಾಕಿದ್ದಾರೆ.

ಪ್ರತಾಪ್ ಸಿಂಹ ಮತ್ತು ಶ್ರೀವತ್ಸ ಅವರ ಮುಂದೆಯೇ ರಾಮದಾಸ್‌ ಅಭಿಮಾನಿಗಳು ಕಣ್ಣೀರು ಹಾಕಿ ತಮ್ಮ ಬೇಸರ ಹೊರಹಾಕಿದ್ದಾರೆ. ಸಾಲದೆಂಬಂತೆ ಸುಮಾರು 30 ನಿಮಿಷ ಕಾದು ನಿಂತ ಪ್ರತಾಪ್ ಸಿಂಹ ಅವರನ್ನು ಬರಿಗೈಲಿ ವಾಪಸ್‌ ಕಳುಹಿಸಿದ್ದಾರೆ.

ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರತಾಪ್ ಸಿಂಹ ತಿಣುಕಾಟ

ರಾಮದಾಸ್‌ ಭೇಟಿ ವಿಫಲವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಪಕ್ಷದಲ್ಲಿ ಇದ್ದು, ಟಿಕೆಟ್ ‘ಮಿಸ್’ ಆದಾಗ ಬೇಸರ ಆಗೋದು ಸಹಜ” ಎಂದು ಹೇಳಿದ್ದಾರೆ.

“ಅವರು ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ” ಎಂದು ಹೇಳುವ ಮೂಲಕ ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...