ಪ್ರೀ-ಮೆಟ್ರಿಕ್ ವಿದ್ಯಾರ್ಥಿ ವೇತನ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Date:

ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP-State Scholarshi Portal) https://ssp.karnataka.gov.inನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50 ಶೇ. ಅಂಕಗಳನ್ನು ಗಳಿಸಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂ. ಒಳಗಿರಬೇಕು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್

https://dom.karnataka.gov.in ಅಥವಾ SSP ಪೋರ್ಟಲ್ https://ssp.karnataka.gov.inಗೆ ಭೇಟಿ ನೀಡಬಹುದು.

ಮಾಹಿತಿಗಳಿಗೆ ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯವು ಪ್ರಕಟನೆಯಲ್ಲಿ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...