ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ

Date:

ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.

ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1775.50 ರೂ.ನಿಂದ 1796.50 ರೂ.ಗೆ ಹೆಚ್ಚಳವಾದಂತಾಗಿದೆ.

ಈ ಹಿಂದೆ ನವೆಂಬರ್ 16 ರಂದು ಅದರ ಬೆಲೆ ಕಡಿತಗೊಂಡು 1775.50 ರೂ. ಆಗಿತ್ತು. ಇಂದಿನಿಂದ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1904 ರೂ., ಮುಂಬೈನಲ್ಲಿ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂ. ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳವು ವಿಶೇಷವಾಗಿ ರೆಸ್ಟೋರೆಂಟ್ ಅಥವಾ ಆಹಾರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.

ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...