ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

Date:

  • ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ
  • ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ. ಅದರ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ಆದರೆ, ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ. ಅದನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸ್ವತಂತ್ರ ಸಂಸ್ಥೆಯಿಂದ ಬೇಗ ಮರು ಪರೀಕ್ಷೆ ನಡೆಸಲು ಕೋರ್ಟ್ ಹೇಳಿದೆ. ಮುಂದಿನ ಸೋಮವಾರ ಅಥವಾ ಮಂಗಳವಾರ ಆದೇಶ ಪ್ರತಿ ಕೈ ಸೇರಲಿದೆ. ತದನಂತರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

“ನೇಮಕಾತಿ ಬಳಿಕ ಅವರಿಗೆ ತರಬೇತಿ ನೀಡಲು 1 ವರ್ಷ ಆಗಲಿದೆ. ರೂಲ್ 32ರಲ್ಲಿ 500 ರಿಂದ 600 ಎಎಸ್ಐಗಳಿಗೆ ಬಡ್ತಿ ನೀಡಿದ್ದೇವೆ. 545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್ಐ ಹುದ್ದೆಗಳು ಖಾಲಿಯಿವೆ. ಎರಡನ್ನೂ ಒಟ್ಟಿಗೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ನಡೆಸಬೇಕೆಂದು ಚರ್ಚೆ ನಡೆಸುತ್ತಿದ್ದೇವೆ. ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ” ಎಂದು ಹೇಳಿದರು.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

545 ಪಿಎಸ್ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.

52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಗಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪೌ‌ಲ್‌ ಬಂಧಿಸಿದ್ದರು. ಇದೀಗ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು...

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ...