ಪಿಎಸ್‌ಐ ಹಗರಣ: ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಮಹತ್ವದ ಆದೇಶ

Date:

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ.

ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ ಎಂದು ‘ಬಾರ್‌ & ಬೆಂಚ್’ ವರದಿ ಮಾಡಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ(ಬಿಜೆಪಿ ಸರ್ಕಾರ) ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದ್ದು, ಅಭ್ಯರ್ಥಿಗಳಿಗೆ ನಿರಾಶೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26ರಂದು ಕಾಯ್ದಿರಿಸಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಈ ಆದೇಶ ಪ್ರಕಟಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...