ನಾಟಕದಲ್ಲಿ ಸೀತೆ ಸಿಗರೇಟ್ ಸೇವನೆ: ಪುಣೆಯ ಪ್ರಾಧ್ಯಾಪಕ,ಐವರು ವಿದ್ಯಾರ್ಥಿಗಳ ಬಂಧನ

Date:

ರಾಮಲೀಲಾ ನಾಟಕದ ಸೀತೆಯ ಪಾತ್ರದಲ್ಲಿ ಹಿಂಧೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕಾರಣಕ್ಕಾಗಿ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯ ಓರ್ವ ಪ್ರಾಧ್ಯಾಪಕ ಹಾಗೂ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ರಾಮಲೀಲಾ ನಾಟಕದಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳು ಹಾಗೂ ದೃಶ್ಯಗಳಿದ್ದವು. ವೈರಲ್‌ ಆದ ವಿಡಿಯೋದಲ್ಲಿ ಸೀತೆ ಪಾತ್ರದಲ್ಲಿದ್ದ ಪುರುಷ ಕಲಾವಿದರೊಬ್ಬರು ಸಿಗರೇಟ್ ಸೇವನೆ ಮಾಡುವುದಲ್ಲದೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದರು.

ಈ ನಾಟಕವನ್ನು ಪುಣೆ ವಿವಿಯ ಕ್ಯಾಂಪಸ್‌ನಲ್ಲಿ ಆಡಿಸಲಾಗಿತ್ತು. ನಾಟಕ ನೋಡಿದ ಪುಣೆ ವಿವಿಯ ಲಲಿತಾ ಕೇಂದ್ರದ ಆರ್‌ಎಸ್ಎಸ್‌, ಎಬಿವಿಪಿ ವಿದ್ಯಾರ್ಥಿಗಳು ನಾಟಕಕ್ಕೆ ವಿರೋಧ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಎಬಿವಿಪಿ ಕಾರ್ಯಕರ್ತರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 295(ಎ)(ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಕೆರಳಿಸುವಂತೆ ನೋವುಂಟು ಮಾಡುವುದು) ಹಾಗೂ ಇತರ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಲಲಿತಾ ಕಲಾ ಕೇಂದ್ರದ ಪ್ರಾಧ್ಯಾಪಕ ಡಾ. ಪ್ರವೀಣ್ ಬೋಲೆ ಹಾಗೂ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...