ಕಾಂಗೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಉಗ್ರರ ಚಟುವಟಿಕೆ ಜೀವಂತ: ಆರ್‌ ಅಶೋಕ್ ಆರೋಪ

Date:

  • ಬೆಂಗಳೂರಿನ ಪೊಲೀಸ್‌ ಠಾಣೆಗಳಲ್ಲಿ ಪೊಲೀಸರಿಗೆ ಕುರಾನ್ ಹಂಚಲಾಗಿದೆ
  • ಬೆಂಗಳೂರಿನಲ್ಲಿ ಭಯದ ವಾತಾವರಣ ನಿರ್ಮಿಸಲು ಉಗ್ರರಿಂದ ಸಂಚು

ಕಾಂಗ್ರೆಸ್ ಯಾವ ಯಾವ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆಯೋ ಅಲ್ಲಿ ಉಗ್ರರ ಚಟುವಟಿಕೆ ತಾನಾಗಿಯೇ ಆರಂಭವಾಗುತ್ತದೆ. ಉಗ್ರರು ಬೆಳೆಯಲು ಸೊಂಪಾದ ವಾತಾವರಣ ಸಹಜವಾಗಿ ಸೃಷ್ಟಿಯಾಗುತ್ತದೆ ಎಂದು ಮಾಜಿ ಸಚಿವ ಆರ್‌ ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಯಾವುದೋ ದಾಖಲೆ ತರಲು ಬೆಂಗಳೂರಿನ ಪೊಲೀಸ್‌ ಠಾಣೆಗೆ ಹೋಗಿದ್ದೆ. ಆ ಠಾಣೆಯಲ್ಲಿ ಎಲ್ಲ ಪೊಲೀಸರಿಗೂ ಕುರಾನ್ ಹಂಚಲಾಗಿದೆ. ಕುರಾನ್ ಹಂಚಿರುವ ಬಗ್ಗೆ ಸಹಿ ಕೂಡ ಮಾಡಿಸಿಕೊಳ್ಳಲಾಗಿದೆ ಎಂಬುದು ನನಗಿರುವ ಮಾಹಿತಿ” ಎಂದರು.

“ಕರ್ನಾಟಕದ ಪರಿಸ್ಥಿತಿ ಹೇಗೆ ಹಾಳಾಗುತ್ತಿದೆ ಎಂಬುದು ಈಗ ಅರ್ಥವಾಗುತ್ತಿದೆ. ಇದಕ್ಕೆ ಇವತ್ತು ಸಿಕ್ಕಿರುವ ಉಗ್ರರು ಸಾಕ್ಷಿ. ಇಡೀ ಬೆಂಗಳೂರನ್ನೇ ಉಡಾಯಿಸಲು ಸಂಚು ರೂಪಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿದೆ. ಈ ಖ್ಯಾತಿಗೆ ಕಳಂಕ ತರಲು ಉಗ್ರರು ಹೊಂಚು ಹಾಕಿದ್ದರು” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

“ಬೆಂಗಳೂರಿಗೆ ವಿದೇಶಿ ಬಂಡವಾಳಗಾರರು ಬರಬಾರದು, ಈ ಕಾರಣಕ್ಕಾಗಿ ಬೆಂಗಳೂರು ಖ್ಯಾತಿ ಹಾಳು ಮಾಡಲು, ಭಯದ ವಾತಾವರಣ ನಿರ್ಮಿಸಬೇಕು ಎಂಬ ದೃಷ್ಟಿಯಿಂದ ಈ ಉಗ್ರರು ಸಂಚು ಹೆಣೆದಿದ್ದರು ಎಂಬುದು ಸ್ಪಷ್ಟವಾಗಿ ಕಾಣುತ್ತದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಭ್ರಷ್ಟಾಚಾರ ಲೀಗಲೈಜ್ ಮಾಡಿದ್ದೇ ಬಿಜೆಪಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ

ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...