ಕೇಜ್ರಿವಾಲ್‌ಗೆ ಸಮನ್ಸ್‌ | ಪ್ರತಿಭಟಿಸಿದ ರಾಘವ್‌ ಚಡ್ಡಾ, ಸಂಜಯ್‌ ಸಿಂಗ್‌ ಪೊಲೀಸ್‌ ವಶಕ್ಕೆ

Date:

  • ಪ್ರತಿಭಟನೆಯಲ್ಲಿ ರಾಘವ್‌ ಚಡ್ಡಾ ಜೊತೆ ಹಲವರು ಭಾಗಿ
  • ಸಿಬಿಐ ವಿಚಾರಣೆಗೆ ಹಾಜರಾದ ಅರವಿಂದ್‌ ಕೇಜ್ರಿವಾಲ್‌

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸಿದ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕರಾದ ರಾಘವ್‌ ಚಡ್ಡಾ ಸೇರಿದಂತೆ ಇತರರನ್ನು ಪೊಲೀಸರು ಭಾನುವಾರ (ಏಪ್ರಿಲ್‌ 16) ವಶಕ್ಕೆ ಪಡೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ದಳ (ಸಿಬಿಐ) ಕೇಜ್ರಿವಾಲ್‌ ಅವರಿಗೆ ಎರಡು ದಿನಗಳ ಹಿಂದೆ ಸಮನ್ಸ್ ನೀಡಿದೆ.

ಕೇಜ್ರಿವಾಲ್ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದ 1500ಕ್ಕೂ ಹೆಚ್ಚು ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಈ ಪೈಕಿ 1379 ಜನರನ್ನು ನಾನಾ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ. ಇತರರನ್ನು ಬಸ್‌ಗಳಲ್ಲಿ ಕರೆದೊಯ್ಯಲಾಗುತ್ತಿದೆ ಎಂದು ಎಎಪಿ ನಾಯಕ ಮತ್ತು ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೆಹಲಿಯಾದ್ಯಂತ ಎಎಪಿ ನಾಯಕರು ಬೀದಿಗಿಳಿದು ಪ್ರತಿಭಟಿಸಿದರು. ಇದರಲ್ಲಿ ರಾಘವ್‌ ಚಡ್ಡಾ, ಸಂಜಯ್‌ ಸಿಂಗ್‌ ಮೊದಲಾದ ನಾಯಕರು ಸೇರಿದ್ದಾರೆ.

ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್ ನೀಡಿರುವುದನ್ನು ರಾಘವ್‌ ಚಡ್ಡಾ ಸೇರಿ ಅನೇಕರು ಖಂಡಿಸಿದ್ದಾರೆ. ಪ್ರತಿಭಟನೆಯಿಂದ ಭಾನುವಾರ ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಸಚಿವರಾದ ಅತಿಶಿ, ರಾಘವ್ ಚಡ್ಡಾ, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಸೇರಿದಂತೆ ದೆಹಲಿಯ ಸಿಬಿಐ ಕಚೇರಿಯ ಮುಂದೆ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆಗೆ ಹೆದರುತ್ತಿದ್ದಾರೆ. ಇದಕ್ಕಾಗಿ ಎಎಪಿ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಇದೇ ಕಾರಣಕ್ಕೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಸಾವಿರಾರು ಕೋಟಿ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಒಂದು ರೂಪಾಯಿ ಕೂಡ ಅವ್ಯವಹಾರ ನಡೆದಿರುವುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಇಡೀ ದೇಶ ಅರವಿಂದ್ ಕೇಜ್ರಿವಾಲ್ ಅವರೊಡನೆ ನಿಂತಿದೆ” ಎಂದು ಸಚಿವ ಅತಿಶಿ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

ಅಬಕಾರಿ ನೀತಿ ಹಗರಣ ಪ್ರಕರಣದ ವಿಚಾರಣೆಗಾಗಿ ಅರವಿಂದ್‌ ಕೇಜ್ರಿವಾಲ್ ಅವರು ಭಾನುವಾರ ಬೆಳಿಗ್ಗೆ ದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಆಗಮಿಸಿದ್ದರು.

“ಸಿಬಿಐನ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಸಿಬಿಐ ಬಿಜೆಪಿ ನಿಯಂತ್ರಣದಲ್ಲಿದ್ದು, ನನ್ನನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಕೇಜ್ರಿವಾಲ್‌ ಸಿಬಿಐ ಕಚೇರಿಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿಂಘು ಗಡಿಯಲ್ಲಿ ಪಂಜಾಬ್ ಸಚಿವರನ್ನು ತಡೆದ ಪೊಲೀಸರು, ದೆಹಲಿಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಮಾನಹಾನಿ ಪ್ರಕರಣ ; ರಾಹುಲ್‌ ಗಾಂಧಿಗೆ ಶಾಶ್ವತ ವಿನಾಯತಿ

ಪ್ರತಿಭಟನೆಯಲ್ಲಿ ಪಂಜಾಬ್ ಆರೋಗ್ಯ ಸಚಿವ ಡಾ. ಬಲ್ಬೀರ್ ಸಿಂಗ್, ಪಂಜಾಬ್ ಕಂದಾಯ ಸಚಿವ ಬ್ರಮ್ ಶಂಕರ್ ಜಿಂಪಾ, ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಎಎಪಿ ನಾಯಕರಾದ ಕುಲ್ಜಿತ್ ರಾಂಧವಾ ಮತ್ತು ದಿನೇಶ್ ಚಡ್ಡಾ ಸೇರಿದ್ದರು.

ಪ್ರತಿಭಟನೆ ವೇಳೆ ರಾಘವ್ ಚಡ್ಡಾ, ಸಂಜಯ್ ಸಿಂಗ್ ಮೊದಲಾದವರ ಬಂಧನ ವಿರೋಧಿಸಿ ಎಎಪಿ ನಾಯಕರು ಸಿಬಿಐ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...