ಮಗನ ಆಟ ನೋಡಲು ಪತ್ನಿಯ ಜೊತೆ ಮೈಸೂರಿಗೆ ಬಂದ ರಾಹುಲ್ ದ್ರಾವಿಡ್

Date:

ಏಕದಿನ ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ತಮ್ಮ ಮಗನ ಸಲುವಾಗಿ ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ.

ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ ಸಿಎ) ಮೈಸೂರು ವಲಯ ಆಯೋಜಿಸಿದ್ದ 19 ವರ್ಷದೊಳಗಿನವರ ಕೂಚ್ ಬೆಹಾ ರ್ ರಾಷ್ಟ್ರೀ ಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ ಮಾನಸ ಗಂಗೋತ್ರಿಯ ಎಸ್ ಡಿಎನ್ ಆರ್ (ಶ್ರೀ ಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ.

ಆತಿಥೇಯ ಕರ್ನಾಟಕ ತಂಡವು ಉತ್ತರಾಖಂಡ್ ವಿರುದ್ಧ 4 ದಿನದ ಪಂದ್ಯ ಆಡುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

ಆಲ್ರೌಂಡಡರ್ ಆಗಿರುವ ಸಮಿತ್ ಆಟವನ್ನು ನೋಡಲು ರಾಹುಲ್ ದ್ರಾವಿಡ್ ಮತ್ತು ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಕ್ರೀಡಾಂಗಣದಲ್ಲಿ ನೆಲದ ಮೇಲೆ ಕುಳಿತು ರಾಹುಲ್ ಮಗನ ಆಟವನ್ನು ಗಮನಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ ಅವರು ತಾವು ಇತರ ಮಕ್ಕಳ ಪೋಷಕರಂತೆ ನಾನು ಬಂದಿದ್ದೇ ನೆ ಎಂದರು.

ಏಕದಿನ ವಿಶ್ವಕಪ್ ನಂತರ ದ್ರಾವಿಡ್ ಅವರ ಮುಖ್ಯ ಕೋಚ್‌ ಅವಧಿ ಮುಗಿದಿದ್ದು, ಬಿಸಿಸಿಐ ಮುಂದಿನ ಟಿ20 ವಿಶ್ವಕಪ್‌ ತನಕ ಮುಂದುವರಿಸುವುದಾಗಿ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...