ಮಳೆಬಾಧಿತ ಭಾರತ-ಪಾಕಿಸ್ತಾನ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

Date:

ಭಾರತ-ಪಾಕಿಸ್ತಾನ ನಡುವಿನ ಸೂಪರ್-4 ಹಂತದ ಮೂರನೇ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್​ ಕಲೆಹಾಕಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಸ್ವಲ್ಪ ಹೊತ್ತು ಮಳೆ ನಿಂತರೂ, ಪಂದ್ಯ ಆರಂಭಕ್ಕೆ ಸಿದ್ಧತೆ ನಡೆಸಲಾಗಿತ್ತು. ಈ ವೇಳೆ ಮತ್ತೆ ವಿಪರೀತ ಮಳೆ ಸುರಿದ ಪರಿಣಾಮ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೋಮವಾರ ಉಭಯ ತಂಡಗಳು 50 ಓವರ್​ಗಳ ಪಂದ್ಯವನ್ನಾಡಲಿದೆ. ಈಗಾಗಲೇ 24.1 ಓವರ್​ಗಳನ್ನು ಆಡಿರುವ ಟೀಮ್ ಇಂಡಿಯಾ, ಉಳಿದ ಓವರ್​ಗಳನ್ನು ಆಡಲಿದೆ. ಮಳೆ ಬಂದಾಗ ಟೀಮ್ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರೀಸ್‌ನಲ್ಲಿದ್ದರು.

ಈಗಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 49 ಎಸೆತಗಳನ್ನು ಎದುರಿಸಿ 4 ಸಿಕ್ಸ್ ಹಾಗೂ 6 ಬೌಂಡರಿಯ ನೆರವಿನಿಂದ 56 ರನ್ ಹಾಗೂ 52 ಎಸೆತಗಳಲ್ಲಿ 10 ಬೌಂಡರಿಯ ನೆರವಿನಿಂದ 58 ರನ್ ​ಗಳಿಸಿದ್ದ ಶುಭ​ಮನ್ ಗಿಲ್ ಔಟಾಗಿದ್ದಾರೆ. ರೋಹಿತ್ ಶರ್ಮಾ ಶಾದಾಬ್ ಖಾನ್‌ಗೆ ವಿಕೆಟ್ ಒಪ್ಪಿಸಿದರೆ, ಶುಭ​ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಯಾಚಿತ್ತು ಔಟಾಗಿದ್ದರು.

ಅದಕ್ಕೂ ಮೊದಲು ಈ ಜೋಡಿ ಮೊದಲ ವಿಕೆಟ್‌ಗೆ 16.3 ಓವರ್​ಗಳಲ್ಲಿ 121 ರನ್​ಗಳ​ ಜೊತೆಯಾಟ ನೀಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...