ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು

Date:

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಅವರನ್ನು ಬುಧವಾರ (ಏಪ್ರಿಲ್‌ 03) ಚೆನ್ನೈ ವಿಮಾನ ನಿಲ್ದಾಣದಿಂದ ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಯಿತು ಎಂದು ವರದಿ ತಿಳಿಸಿದೆ.

ಜೈಲಿನಲ್ಲಿ ಅಪರಾಧಿಗಳ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಮೂವರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ಶಿಫಾರಸ್ಸು ಮಾಡಿತ್ತು. ಅದರಂತೆ, 2022 ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ರಾಜೀವ್ಗಾಂಧಿ ಹಂತಕರಾದ ಮುರುಗನ್‌, ರಾಬರ್ಟ್ಪಾಯಸ್‌, ಜಯಕುಮಾರ್ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸಲು ಆದೇಶ ನೀಡಿತ್ತು.

ನವೆಂಬರ್ 2022ರಲ್ಲಿ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಪ್ರಕರಣದ ಏಳು ಅಪರಾಧಿಗಳಲ್ಲಿ ಈ ಮೂವರೂ ಸೇರಿದ್ದಾರೆ. ಬಿಡುಗಡೆಯಾದ ನಂತರ, ಶ್ರೀಲಂಕಾ ಪ್ರಜೆಗಳಾದ ಮೂವರನ್ನು ತಿರುಚಿರಾಪಲ್ಲಿಯ ವಿಶೇಷ ಶಿಬಿರದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಇರಿಸಲಾಗಿತ್ತು. ಪೊಲೀಸ್ಅಧಿಕಾರಿಗಳ ತಂಡ ಮೂವರನ್ನ ಏಪ್ರಿಲ್ 2ರಂದು ರಾತ್ರಿ ಚೆನ್ನೈಗೆ ಕರೆತಂದು, ಏಪ್ರಿಲ್ 3ರಂದು ಕೊಲಂಬೊ (ಶ್ರೀಲಂಕಾ)ಗೆ ಗಡಿಪಾರು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್) ಗಡಿಪಾರು ಆದೇಶ ಹೊರಡಿಸಿದ ನಂತರ ಅವರು ಮನೆಗೆ ಹಿಂತಿರುಗಬಹುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ಗೆ ಹಿಂದೆ ತಿಳಿಸಿತ್ತು. ಇಲ್ಲಿನ ಶ್ರೀಲಂಕಾ ಹೈಕಮಿಷನ್ ಹಿಂದೆ ಅವರಿಗೆ ಸ್ವದೇಶಕ್ಕೆ ಮರಳಲು ಪ್ರಯಾಣ ದಾಖಲೆಗಳನ್ನು ನೀಡಿತ್ತು.

ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮತ್ತೊಬ್ಬ ಶ್ರೀಲಂಕಾ ಪ್ರಜೆ ಸಂತಾನ್ ಇತ್ತೀಚೆಗೆ ಮೃತಪಟ್ಟಿದ್ದರು. ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟ ಮತ್ತು ಬಿಡುಗಡೆಗೊಂಡಿರುವ ಇತರರೆಂದರೆ ಪೆರಾರಿವಾಲನ್, ರವಿಚಂದ್ರನ್ ಮತ್ತು ನಳಿನಿ ಎಲ್ಲ ಭಾರತೀಯರು. ಈ ಎಲ್ಲ ಏಳು ಮಂದಿ 30 ವರ್ಷಗಳ ಕಾಲ ಜೈಲಿನಲ್ಲಿದ್ದರು.

 ಸುದ್ದಿ ಓದಿದ್ದೀರಾ? ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ಶ್ರೀಲಂಕಾ ಪ್ರಜೆಯಾದ ಆರೋಪಿ ಮುರುಗನ್‌, ಆರೋಪಿ ನಳಿನಿಯನ್ನು ವಿವಾಹವಾಗಿದ್ದನು. ಈ ಪ್ರಕರಣದಲ್ಲಿ ದಿ.ರಾಜೀವ್‌ ಗಾಂಧಿ ಪತ್ನಿ ಸೋನಿಯಾ ಗಾಂಧಿ ಮಧ್ಯಪ್ರವೇಶಿಸಿ, ಗರ್ಭಿಣಿಯಾಗಿದ್ದ ನಳಿನಿಯ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ಕೊಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ, ಜೀವದಾನ ಪಡೆದ ನಳಿನಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ನಳಿನಿ ಪುತ್ರಿ ಯುನೈಟೆಡ್ಕಿಂಗ್ಡಮ್‌ನಲ್ಲಿ ವೈದ್ಯೆಯಾಗಿದ್ದಾಳೆ.

1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರ್‌ನಲ್ಲಿ ರಾಹುಲ್ ಗಾಂಧಿ ಅವರ ಹತ್ಯೆ ನಡೆದಿತ್ತು. ನೆರೆಯ ಶ್ರೀಲಂಕಾದಲ್ಲಿ ಸಕ್ರಿಯವಾಗಿದ್ದ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್ ಈ ಕೃತ್ಯ ಎಸಗಿದ್ದಳು. ಮಹಿಳಾ ಆತ್ಮಹತ್ಯಾ ಬಾಂಬರ್‌ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ ರಾಜೀವ್‌ ಗಾಂಧಿಯನ್ನು ಹತ್ಯೆಗೈದಿದ್ದರು. ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿ ಸುಪ್ರೀಂಕೋರ್ಟ್ಆದೇಶ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...

ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು "ನುಸುಳುಕೋರರಿಗೆ" ಹಂಚಲಿದೆ...

‘ಈ ದಿನ’ ಸಮೀಕ್ಷೆ | ಗ್ಯಾರಂಟಿ ಯೋಜನೆ ಬೆಂಬಲಿಸಿ ಕಾಂಗ್ರೆಸ್‌ಗೆ ಮತ ಹಾಕ್ತೀರಾ, ಜನರು ಹೇಳೋದೇನು?

ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ...