ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಈಜುಕೊಳ ತೆರವು

Date:

ಬೆಂಗಳೂರಿನ ದೊಡ್ಡನೆಕ್ಕುಂದಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಅಕ್ರಮವಾಗಿ ಈಜುಕೊಳ ನಿರ್ಮಾಣ ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬುಲ್ಡೋಜರ್ ಮೂಲಕ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದ ರಾಜಧಾನಿ ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್‌ಸಿಟಿ ಲೇಔಟ್‌ನಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಬಿಬಿಎಂಪಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಮಾರ್ಕ್ ಮಾಡಿದ್ದ ರಾಜಕಾಲುವೆ ಒತ್ತುವರಿ ಸ್ಥಳಕ್ಕೆ ಬುಲ್ಡೋಜರ್ ಸಮೇತ ತೆರಳಿ, ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಫರ್ನ್‌ಸಿಟಿ ಲೇಔಟ್‌ನಲ್ಲಿ ನಿವಾಸಿಗಳು ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿ ಈಜುಕೊಳ ಹಾಗೂ ಕ್ಲಬ್‌ ನಿರ್ಮಾಣ ಮಾಡಿಕೊಂಡಿದ್ದು, ಜೆಸಿಬಿ ಹಿಟಾಚಿಗಳಿಂದ ಈಜುಕೊಳ ಹಾಗೂ ಐಷಾರಾಮಿ ಕ್ಲಬ್‌ನ ಗೋಡೆ ತೆರವು ಮಾಡಲಾಗುತ್ತಿದೆ. ಒತ್ತುವರಿ ತೆರವು ವೇಳೆ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಇನ್ನೂ ಒತ್ತುವರಿ ತೆರವು ವೇಳೆ ಬಿಬಿಎಂಪಿ ಅಧಿಕಾರಿಗಳಿಗೆ ಬಿಜೆಪಿ ನಾಯಕ ನಂದೀಶ್​ ರೆಡ್ಡಿ ತೆರವು ಮಾಡದಂತೆ ತಡೆದಿದ್ದು, ಏರು ಧ್ವನಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಜೆಸಿಬಿ ಮೇಲೆ ಹತ್ತಿ ಬೀಗ ಕಿತ್ತುಕೊಂಡಿದ್ದಾರೆ. ಜೆಸಿಬಿ ಮುಂದೆ ಅಡ್ಡ ಕೂರುತ್ತೇನೆ. ತೆರವು ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...