ರಾಜ್ಯಸಭಾ ಚುನಾವಣೆ | ಕಾಂಗ್ರೆಸ್‌ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ಮೂವರು

Date:

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಸ್ಪರ್ಧಿಸಲಿದ್ದಾರೆ.

ಕರ್ನಾಟಕ, ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದ್ದು, ಕರ್ನಾಟಕದಿಂದ ಕಾಂಗ್ರೆಸ್‌ನ ಹಿರಿಯ ಮುಖಂಡ ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ತೆಲಂಗಾಣದಿಂದ ರೇಣುಕಾ ಚೌಧರಿ, ಎಂ ಅನಿಲ್ ಕುಮಾರ್ ಯಾದವ್‌ ಅಭ್ಯರ್ಥಿಯಾದರೆ, ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಜಿ.ಸಿ. ಚಂದ್ರಶೇಖರ್, ಅಜಯ್ ಮಾಕೆನ್, ಡಾ. ಸೈಯ್ಯದ್ ನಾಸೀರ್ ಹುಸೇನ್

ರಾಜ್ಯಸಭೆಗೆ ಕರ್ನಾಟದ ನಾಲ್ಕು ಸ್ಥಾನಗಳಿಗೆ ಇದೇ ಬರುವ ಗುರುವಾರ (ಫೆ.15) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿದೆ. ಆ ಮೂಲಕ, ರಾಜ್ಯ ಬಿಜೆಪಿ ಘಟಕಕ್ಕೆ ಸುಳಿವೇ ಇಲ್ಲದಂತೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು.

ಕಾಂಗ್ರೆಸ್‌ನಿಂದ ಮೂವರು, ಬಿಜೆಪಿಯಿಂದ ಒಬ್ಬರು ನಿರಾಯಾಸವಾಗಿ ಈಗಿನ ಸಂಖ್ಯಾಬಲದ ಆಧಾರದ ಮೇಲೆ ಗೆಲ್ಲಬಹುದಾಗಿದೆ. ಆದರೆ, ರಾಜ್ಯಸಭಾ ಚುನಾವಣೆಯಲ್ಲೂ ಅಡ್ಡ ಮತದಾನ ನಡೆಯುವ ಸಾಧ್ಯತೆಯೂ ಇರುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...